ಮಂಗಳೂರು: ನಗರದ ತಣ್ಣೀರುಬಾವಿ ಬೀಚ್ನಲ್ಲಿ ರಸ್ತೆ ಬ್ಲಾಕ್ ಆಗಿರುವುದಕ್ಕೆ ಕ್ರಿಕೆಟ್ ಆಡುತ್ತಿದ್ದ ಯುವಕರೇ ಕಾರಣವೆಂದು ಪೊಲೀಸರು ಲಾಠಿ ಬೀಸಿದ ಘಟನೆ ನಡೆದಿದೆ. ಘಟನೆಯಿಂದ ಆರನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾರಾಂತ್ಯ ಆಗಿರುವುದರಿಂದ ಶನಿವಾರ ಬೆಳಗ್ಗೆಯಿಂದಲೂ ತಣ್ಣೀರುಬಾವಿ ಬೀಚ್ನಲ್ಲಿ ಜನದಟ್ಟಣೆ ಅಧಿಕವಾಗಿತ್ತು. ನಿನ್ನೆ ಸಂಜೆ ಅಲ್ಲಿ ಕ್ರಿಕೆಟ್ ಆಡಿ ಬೈಕ್ನಲ್ಲಿ ತೆರಳುತ್ತಿದ್ದ ಯುವಕರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ರಸ್ತೆ ಬ್ಲಾಕ್ ಆಗಿದೆಯೆಂದು ಥಳಿಸಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಆರನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಬೀದರ್ನಲ್ಲಿ ತಲ್ವಾರ್ ಹಿಡಿದು ಯುವಕರ ಪುಂಡಾಟ: ಲಾಠಿ ರುಚಿ ತೋರಿಸಿದ ಪೊಲೀಸರು
ಈ ಬಗ್ಗೆ ಪ್ರತಿಕ್ರಿಯಿಸಿರುವ ಪಣಂಬೂರು ಇನ್ಸ್ಪೆಕ್ಟರ್, ಘಟನೆ ಕುರಿತು ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಯುವಕರಿಂದ ತಣ್ಣೀರುಬಾವಿ ಬೀಚ್ನಲ್ಲಿ ಸರ್ಫ್ ಲೈಫ್ ಸೇವಿಂಗ್ ಉಚಿತ ತರಬೇತಿ