ಬಂಟ್ವಾಳ : ತಾಲೂಕಿನ ಪಂಜಿಕಲ್ಲಿನಲ್ಲಿ ವೃದ್ಧೆಯೊಬ್ಬರಿಗೆ ಹೈವೇ ಪೆಟ್ರೋಲಿಂಗ್ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿ ಸಹಾಯ ಮಾಡಿದ್ದಾರೆ. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಂಜಿಕಲ್ಲಿನಲ್ಲಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ವಿಜಯ್ ಹಾಗೂ ಚಾಲಕ ಹೊಯ್ಸಳ ವಾಹನದಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಪಂಜಿಕಲ್ಲಿನ ಗರೋಡಿ ಎಂಬಲ್ಲಿ ಜಿನ್ನು ಎಂಬ ವೃದ್ಧೆ ಅಸಹಾಯಕ ಸ್ಥಿತಿಯಲ್ಲಿದ್ದದ್ದನ್ನು ಗಮನಿಸಿ, ಆಕೆಗೆ ಅಕ್ಕಿ ಮತ್ತಿತರ ದಿನಸಿ ವಸ್ತುಗಳನ್ನು ನೀಡುವ ಮೂಲಕ ಸಹಾಯ ಮಾಡಿದ್ದಾರೆ. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈಗಾಗಲೇ ಪಂಜಿಕಲ್ಲು ಗ್ರಾಪಂ ವ್ಯಾಪ್ತಿಯಲ್ಲಿ ಎಸ್ಐ ಪ್ರಸನ್ನ ಅವರ ನಿರ್ದೇಶನದಂತೆ ಬೀಟ್ ಪೊಲೀಸ್ ಸಿಬ್ಬಂದಿ ಬಸವರಾಜು ಲಾಕ್ಡೌನ್ ಸಂದರ್ಭದಲ್ಲಿ ಹಲವು ಕುಟುಂಬಗಳಿಗೆ ಸಹಾಯ ಮಾಡಿದ್ದು, ಪೊಲೀಸರ ಈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗುತ್ತಿದೆ.