ಮಂಗಳೂರು: ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 11 ಮಂದಿ ಆರೋಪಿಗಳನ್ನು ಬಂಧಿಸಿ, ಆರು ವಾಹನಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಗ್ರಾಮದಲ್ಲಿ ನಡೆದಿದೆ.
ಕಲ್ಲಬೆಟ್ಟು ಗ್ರಾಮದ ಮನೆಯೊಂದರಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿದ್ದರು. ಈ ಸಂದರ್ಭ ಜೂಜಾಟದಲ್ಲಿ ನಿರತರವಾಗಿ 11 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಲ್ಲದೆ ಜೂಜಾಟಕ್ಕೆ ಬಳಸಿದ್ದ 18,800 ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ಆರು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರ ವಿರುದ್ಧ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.