ಪುತ್ತೂರು(ದಕ್ಷಿಣ ಕನ್ನಡ): ರಾಷ್ಟ್ರೀಯ ತನಿಖಾ ದಳ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಮತ್ತು ಸ್ಥಳೀಯ ಪೊಲೀಸರ ತಂಡ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಇಂದು ಮುಂಜಾನೆಯಿಂದಲೇ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ.
ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರ ಮನೆಗಳಿಗೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಿದ ಪೊಲೀಸರ ತಂಡ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಪುತ್ತೂರಿನ ಸಾಮೆತ್ತಡ್ಕದಲ್ಲಿರುವ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ಮತ್ತು ಉಪ್ಪಿನಂಗಡಿಯ ಎಸ್ಡಿಪಿಐ ಮುಖಂಡ ಆಯುಬ್ ಅಗ್ನಾಡಿ ಮನೆಯನ್ನು ಶೋಧ ಮಾಡಿರುವ ಪೊಲೀಸರು ಹಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ.
ಎಸ್ಡಿಪಿಐ ಮುಖಂಡರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಯ ಕಾರ್ಯಕರ್ತರು ಪುತ್ತೂರಿನ ದರ್ಬೆ ವೃತ್ತದ ಬಳಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಸಾಮೆತ್ತಡ್ಕದ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ಎಂಬುವವರನ್ನು ಪೊಲೀಸರು ಇದೇ ಸಂದರ್ಭದಲ್ಲಿ ವಶಕ್ಕೆ ಪಡೆದು ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಓದಿ: ಹುಬ್ಬಳ್ಳಿ: ಭಿಕ್ಷುಕರ ನೆಪದಲ್ಲಿ ಬಂದು ಚಿನ್ನ ಕದ್ದ ಕಳ್ಳಿಯರು.. ಸಿಸಿಟಿವಿಯಲ್ಲಿ ಕೃತ್ಯ ಸೆರೆ