ETV Bharat / state

ಪ್ರವೀಣ್ ಹತ್ಯೆ ಪ್ರಕರಣ : ಬೆಳ್ತಂಗಡಿಯಲ್ಲಿ ಬಿಗಿ ಬಂದೋಬಸ್ತ್.. ಪೊಲೀಸರ ಪಥ ಸಂಚಲನ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಶಾಂತಿ- ಸುವ್ಯವಸ್ಥೆ ಕಾಪಾಡಲು ಪೊಲೀಸರಿಂದ ಪಥಸಂಚಲನ - ಬೆಳ್ತಂಗಡಿಯಲ್ಲಿ ಬಿಗಿಬಂದೋಬಸ್ತ್

author img

By

Published : Jul 28, 2022, 7:58 PM IST

police-route-march-at-belthangadi-taluk
ಪ್ರವೀಣ್ ಹತ್ಯೆ ಪ್ರಕರಣ : ಬೆಳ್ತಂಗಡಿಯಲ್ಲಿ ಬಿಗಿ ಬಂದೋಬಸ್ತ್ : ಪೊಲೀಸರ ಪಥ ಸಂಚಲನ

ಬೆಳ್ತಂಗಡಿ (ದಕ್ಷಿಣ ಕನ್ನಡ) : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಯಾವುದೇ ಗಲಭೆ ಉಂಟಾಗದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ತಾಲೂಕಿನಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಎಸ್​ಪಿ ಋಷಿಕೇಶ್ ಸೋನಾವಣೆ ಅವರ ಸೂಚನೆಯಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಮತ್ತು ಉಪ ನಿರೀಕ್ಷಕ ನಂದ ಕುಮಾರ್ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ 5 ಠಾಣೆಗಳ ಪೊಲೀಸರು ಹಾಗೂ ರಾಜ್ಯ ಮೀಸಲು ಸಶಸ್ತ್ರ ಪಡೆಯ ಪೊಲೀಸರು ಬೆಳ್ತಂಗಡಿ ನಗರದಲ್ಲಿ ಪಥ ಸಂಚಲನ ನಡೆಸಿದರು. ಈಗಾಗಲೇ ಹತ್ಯೆಗೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತಿದ್ದಾರೆ.

ಮಂಗಳವಾರ ರಾತ್ರಿ(ಜು.26) ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮದಲ್ಲಿ ಪ್ರವೀಣ್​ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಚರ್ಚೆ ಆಗ್ತಿದೆ. ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಓದಿ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮೋದ್ ಮುತಾಲಿಕ್​ಗೆ ದ.ಕ ಜಿಲ್ಲಾ ಪ್ರವೇಶ ನಿಷೇಧ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.