ಮಂಗಳೂರು: ನಗರದ ಕಲ್ಲಾಪು ಸಮೀಪ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳು ಅಡ್ಡೆ ಮೇಲೆ ನಗರ ಪೊಲೀಸರು ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 30 ಲೋಡ್ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಕಲ್ಲಾಪು ನದಿ ತೀರದಲ್ಲಿ ಅಕ್ರಮವಾಗಿ ಮರಳು ದಾಸ್ತಾನಿರುವ ಬಗ್ಗೆ ನಗರ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ನಗರ ಕಾನೂನು ಸುವ್ಯವಸ್ಥಾ ವಿಭಾಗದ ಡಿಸಿಪಿ ಅರುಣಾಂಗ್ಶು ಗಿರಿ ನೇತೃತ್ವದ ತಂಡ ದಾಳಿ ನಡೆಸಿದೆ.
ಈ ವೇಳೆ ಸುಮಾರು 30 ಲೋಡ್ ಮರಳು ಮತ್ತು 10 ದೋಣಿಗಳು ಪತ್ತೆಯಾಗಿದ್ದು, ಮುಟ್ಟುಗೋಲು ಮಾಡಿಕೊಳ್ಳಲಾಗಿದೆ. ಈಗಾಗಲೇ ಆರು ದೋಣಿಗಳನ್ನು ಸ್ಥಳಾಂತರಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕಂಕನಾಡಿ ನಗರ ಠಾಣೆಯ ಇನ್‌ಸ್ಪೆಕ್ಟರ್ ಅಶೋಕ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪ್ರಭಾರ ಉಪ ನಿರ್ದೇಶಕಿ ಪದ್ಮಶ್ರೀ ಆರ್. ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.