ಮಂಗಳೂರು: ಕಸಾಯಿಖಾನೆ ವಿರುದ್ಧ ಕ್ರಮಕ್ಕೆ ಮುಂದಾಗಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ ಮೂರು ಕಡೆ ದಾಳಿ ನಡೆಸಿ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಮಂಗಳೂರು ಉತ್ತರ ಕ್ಷೇತ್ರದ ಮೂರು ಕಡೆಗಳಲ್ಲಿ ಆಸ್ತಿ ಮುಟ್ಟುಗೋಲು ಹಾಕಲಾಗಿದೆ.
ಗಂಜಿಮಠದ ಯೂಸೂಫ್, ಅರ್ಕುಳದ ಬಾತೀಶ್ ಮತ್ತು ಕಾಟಿಪಳ್ಳದ ಹಕೀಂ ಅವರ ಆಸ್ತಿಯನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಕಲಂ 8 (4) ಅಡಿಯಲ್ಲಿ ಮುಟ್ಟುಗೋಲು ಹಾಕಲಾಗಿದೆ.
ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ ಕೆಲ ತಿಂಗಳ ಹಿಂದೆ ಕಸಾಯಿಖಾನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ಆರಂಭಿಸಲಾಗಿತ್ತು.
ಇದನ್ನೂ ಓದಿ: ಬಂಟ್ವಾಳದ ಲೊರೆಟ್ಟೊದಲ್ಲಿ ಅಕ್ರಮ ಕಸಾಯಿಖಾನೆ : ಮೂವರ ಬಂಧನ
ಇನ್ನು, ಸರ್ಕಾರ ಮುಟ್ಟುಗೋಲು ಹಾಕಿಕೊಂಡ ಜಾಗವನ್ನು ಮಾರಾಟ, ಬಾಡಿಗೆ ಹಾಗೂ ಯಾವುದೇ ಚಟುವಟಿಕೆ ಬಳಸದಂತೆ ಅಕ್ರಮ ದಂಧೆಗೆ ಅವಕಾಶ ನೀಡಿದವರಿಗೆ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ.. ಮಾಲೀಕ ಸೇರಿ ಮೂವರ ಬಂಧನ