ಮಂಗಳೂರು: ಬಾಬರಿ ಮಸೀದಿ ಭೂಮಿಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿರುವುದನ್ನು ವಿರೋಧಿಸಿ ಎಸ್‌ಡಿಪಿಐ ವತಿಯಿಂದ ನಗರದಲ್ಲಿ ಭಿತ್ತಿಪತ್ರ ಪ್ರದರ್ಶನ ನಡೆಯಿತು.
ಬಾಬರಿ ಮಸೀದಿ ಇದ್ದ ಭೂಮಿಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣ ಸಂವಿಧಾನದ ಮೌಲ್ಯಗಳ ಮೇಲಿನ ದಾಳಿಯಾಗಿದೆ. ಅಲ್ಲದೆ ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ, 370ನೇ ವಿಧಿ ರದ್ದತಿ ಮತ್ತು ತ್ರಿವಳಿ ತಲಾಕ್ ಕಾನೂನಿನ ವಿರುದ್ಧವೂ ಎಸ್‌ಡಿಪಿಐ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಭಿತ್ತಿಪತ್ರ ಪ್ರದರ್ಶನ ನಡೆಯಿತು.
ಭಿತ್ತಿಪತ್ರ ಪ್ರದರ್ಶನದಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್, ದ.ಕ.ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ರಾಜ್ಯ ಸಮಿತಿ ಸದಸ್ಯ ಜಲೀಲ್ ಕೆ., ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷ ಸುಹೈಲ್ ಖಾನ್, ಕಾರ್ಪೊರೇಟರ್ ಮುನೀಬ್ ಬೆಂಗ್ರೆ, ಪಾಪ್ಯುಲರ್ ಫ್ರಂಟ್ ಮಂಗಳೂರು ನಗರ ಅಧ್ಯಕ್ಷ ಖಾದರ್ ಕುಳಾಯಿ, ಕಾರ್ಯದರ್ಶಿ ಆರ್ಷದ್ ಬಂದರ್, ಇಮಾಮ್ಸ್ ಕೌನ್ಸಿಲ್ ಜಿಲ್ಲಾ ಕಾರ್ಯದರ್ಶಿ ರಫೀಕ್ ದಾರಿಮಿ ಭಾಗವಹಿಸಿದ್ದರು.