ಬೆಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 134 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದೇ ಕೆಲಸ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಮಂಗಳೂರು ಮಹಾನಗರ ಪಾಲಿಕೆಯಲ್ಲಿ 119 ಪೌರ ಕಾರ್ಮಿಕ ಹುದ್ದೆಗೆ ಭರ್ತಿಗೆ ಕ್ರಮ.
ಅರ್ಹತೆ: ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಬರಬೇಕು. ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನದ ಆಧಾರದ ಮೇಲೆ ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸಬೇಕು.
ಆಯ್ಕೆ ಪ್ರಕ್ರಿಯೆ: ಮೆರಿಟ್ ಮೂಲಕ ಈ ಹುದ್ದೆಗಳ ಆಯ್ಕೆ ನಡೆಸಲಾಗುವುದು.
ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಂಗಳೂರು ಮಹಾನಗರ ಆಡಳಿತ ಶಾಖೆಯಲ್ಲಿ ಅರ್ಜಿ ನಮೂನೆಯನ್ನು ಪಡೆದುಸಂಬಂಧ ಪಟ್ಟ ದಾಖಲಾತಿಗಳೊಂದಿಗೆಅರ್ಜಿ ನಮೂನೆ ಭರ್ತಿ ಮಾಡಿ, ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಆಡಳಿತಾತ್ಮಕ ಶಾಖೆ, ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು.
ಈ ಹುದ್ದೆಗೆ ಅಭ್ಯರ್ಥಿಗಳು ಜನವರಿ 4 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 18 ಆಗಿದೆ.
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು mangalurucity.mrc.gov.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ. ಈ ಹುದ್ದೆ ಕುರಿತ ಇನ್ನಿತೆ ಮಾಹಿತಿಗೆ 0824-2220313 ಈ ಸಂಖ್ಯೆಗೆ ದೂರವಾಣಿ ಕರೆ ಮಾಡಬಹುದಾಗಿದೆ.
ದಾವಣಗೆರೆ ಮಹಾನಗರ ಪಾಲಿಕೆಯಿಂದ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ ಮಹಾನಗರ ಪಾಲಿಕೆಯಿಂದ ಪೌರ ಕಾರ್ಮಿಕರ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 119 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾನಗರ ಪಾಲಿಕೆಗಳಲ್ಲಿ ಈಗಾಗಲೇ ದಿನಗೂಲಿ ಆಧಾರದ ಮೇಲೆ 2 ವರ್ಷಗಳ ಕಾಲ ಹುದ್ದೆ ನಿರ್ವಹಣೆ ಮಾಡಿದವರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾಸಿಕ 17,000-28,950 ರೂ ವೇತನ ನಿಗದಿಸಿದ್ದು, ಈ ಹುದ್ದೆಗಳಿಗೂ ಕೂಡ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಈ ಹುದ್ದೆ ಅರ್ಜಿ ಸಲ್ಲಿಕೆ ಸೇರಿದಂತೆ ಇತರೆ ಸಂಪೂರ್ಣ ಮಾಹಿತಿಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ದಾವಣಗೆರೆ ಮಹಾನಗರ ಪಾಲಿಕೆಯಿಂದ 119 ಪೌರ ಕಾರ್ಮಿಕ ಹುದ್ದೆಗೆ ಅರ್ಜಿ ಆಹ್ವಾನ