ಮಂಗಳೂರು: ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಗ್ರಹವಾದ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸಲು ಪಾಲಿಕೆ ಚಿಂತನೆ ನಡೆಸುತ್ತಿದೆ.
ಮಂಗಳೂರಿನಲ್ಲಿ ಆ್ಯಂಟನಿ ವೇಸ್ಟ್ ಮ್ಯಾನೇಜ್ಮೆಂಟ್ ಕಸ ಸಂಗ್ರಹಿಸಲು ಗುತ್ತಿಗೆ ಪಡೆದಿದೆ. ಪಚ್ಚನಾಡಿಯಲ್ಲಿ ಸಂಗ್ರಹಿಸುವ ಕಸವನ್ನು ಸಣ್ಣ ಪ್ರಮಾಣದಲ್ಲಿ ಬಯೋಗ್ಯಾಸ್ ಆಗಿ ಮರುಬಳಕೆ ಮಾಡಲಾಗುತ್ತಿದೆ. ಆದರೆ, ಈ ಮರು ಬಳಕೆ ಸಣ್ಣ ಪ್ರಮಾಣದಲ್ಲಿ ಮಾತ್ರ ಇದೆ.
ನಗರದಲ್ಲಿ ದಿನ 300 ಟನ್ ಕಸ ಸಂಗ್ರಹವಾಗುತ್ತಿದ್ದು, ಅದನ್ನು ಮರುಬಳಕೆ ಪ್ರಯತ್ನವಾಗಿ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ರೂಪಿಸಲು ಚಿಂತನೆ ನಡೆಸುತ್ತಿದ್ದೇವೆ ಎಂದು ಮೇಯರ್ ದಿವಾಕರ್ ಪಾಂಡೇಶ್ವರ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.