ETV Bharat / state

ಮಳೆಯಿಂದ ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು: ಬೆಳ್ತಂಗಡಿಯಲ್ಲಿ ಸಂಚಾರಕ್ಕೆ ಅಡ್ಡಿ - Rain in Belthangady

ಮಳೆಯಿಂದ ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಪರಿಣಾಮ ಬೆಳ್ತಂಗಡಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ.

Power poles  fell on the road by rain
ಮಳೆಯಿಂದ ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು
author img

By

Published : Jun 16, 2021, 6:13 PM IST

ಬೆಳ್ತಂಗಡಿ: ನೆರಿಯ ಗ್ರಾಮದ ಅಣಿಯೂರಿನಿಂದ ಕಾಟಾಜೆ, ಪರ್ಪಳಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿ ಕಳೆದ ತಿಂಗಳಿನಿಂದ ನಡೆಯುತ್ತಿದೆ. ಈ ನಡುವೆ ಭಾರಿ ಮಳೆಗೆ ವಿದ್ಯುತ್ ಕಂಬಗಳು ರಸ್ತೆಗೆ ಸಾಲಾಗಿ ಬಿದ್ದಿವೆ.

ಮಳೆಯಿಂದ ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

ಈ ರಸ್ತೆಯ ಪಕ್ಕದಲ್ಲಿ ವಿದ್ಯುತ್ ಕಂಬಗಳು ಸೇರಿದಂತೆ ಖಾಸಗಿ ವಿದ್ಯುತ್ ಉತ್ಪಾದನಾ ಘಟಕಗಳ ವಿದ್ಯುತ್ ಪೂರೈಕೆ ಕಂಬಗಳು ಇವೆ. ವಿದ್ಯುತ್ ಕಂಬಗಳ ಬುಡದವರೆಗೂ ರಸ್ತೆ ನಿರ್ಮಾಣಕ್ಕೆ ಗುಡ್ಡ ಕೊರೆದು ಗುತ್ತಿಗೆದಾರರು ಬೇಜವಾಬ್ದಾರಿ ವಹಿಸಿದ್ದಾರೆ ಎನ್ನಲಾಗಿದೆ. ವಾರದಿಂದ ಮಳೆ ಸುರಿಯುತ್ತಿದ್ದು, ಕಾಟಾಚಾರದ ಕಾಮಗಾರಿಯಿಂದ ವಿದ್ಯುತ್ ಕಂಬಗಳು ರಸ್ತೆ ಮೇಲೆ ಕುಸಿದು ಬಿದ್ದಿವೆ. ಇದರಿಂದ ಜನರಿಗೆ ಸಂಚರಿಸಲು ಕಷ್ಟವಾಗುತ್ತಿದೆ.

ತಡರಾತ್ರಿ ಈ ಘಟನೆ ನಡೆದಿದ್ದು, ಯೆನಪೋಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ಸೇರಿದ 8 ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಇನ್ನಷ್ಟು ಕಂಬಗಳು ಬೀಳುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಗಾಳಿ ಮಳೆಗೆ ಈ ಪ್ರದೇಶದಲ್ಲಿ ರಬ್ಬರ್, ಅಡಿಕೆ ತೋಟಗಳಿಗೂ ವ್ಯಾಪಕ ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಓದಿ:ಇಂದು ಸಚಿವರು, ನಾಳೆ ಶಾಸಕರು, ನಾಡಿದ್ದು ಕೋರ್ ಕಮಿಟಿ ಸಭೆ; ಟ್ರಬಲ್ ಶೂಟ್​​ಗೆ ಅರುಣ್ ಸಿಂಗ್ ಆಗಮನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.