ETV Bharat / state

ಗೋಹತ್ಯೆ ಕಾಯ್ದೆ ಉಲ್ಲಂಘನೆ ಮಾಡಿದ್ರೆ 3 ವರ್ಷದಿಂದ 6 ವರ್ಷ ಜೈಲು ಶಿಕ್ಷೆ: ಸಚಿವ ಚವ್ಹಾಣ್​

ಮೊದಲನೇ ಅಪರಾಧಕ್ಕೆ 50 ಸಾವಿರದಿಂದ 5 ಲಕ್ಷದವರೆಗೆ ಹಾಗೂ ಎರಡನೇ ಸಲ ಮಾಡಿದ ಅಪರಾಧಕ್ಕೆ ಒಂದು ಲಕ್ಷದಿಂದ 10ಲಕ್ಷದವೆರೆಗೆ ದಂಡ ವಿಧಿಸಲಾಗುವುದು ಎಂದು ಹೇಳಿದರು.

Prabhu Chauhan
Prabhu Chauhan
author img

By

Published : Jan 20, 2021, 2:28 AM IST

ಮಂಗಳೂರು: ಗೋಹತ್ಯೆ ಕಾಯ್ದೆ ಉಲ್ಲಂಘನೆ ಮಾಡಿದರೆ ಅಂತವರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಮೂರು ವರ್ಷದಿಂದ ಆರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು.ಬಿ ಚವ್ಹಾಣ್​ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೊದಲನೇ ಅಪರಾಧಕ್ಕೆ 50 ಸಾವಿರದಿಂದ 5 ಲಕ್ಷದವರೆಗೆ ಹಾಗೂ ಎರಡನೇ ಸಲ ಮಾಡಿದ ಅಪರಾಧಕ್ಕೆ ಒಂದು ಲಕ್ಷದಿಂದ 10ಲಕ್ಷದವೆರೆಗೆ ದಂಡ ವಿಧಿಸಲಾಗುವುದು ಎಂದು ಹೇಳಿದರು.

ಓದಿ: ಗೋರಕ್ಷಕರ ಮೇಲಿನ ಕೇಸ್ ಹಿಂಪಡೆದುಕೊಳ್ಳಲು ಕ್ರಮ: ಸಚಿವ ಪ್ರಭು ಚವ್ಹಾಣ್

ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರೊಂದಿಗೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಜಾನುವಾರುಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಾಣೆ ಮಾಡುವಾಗ ಪಶು ವೈದ್ಯರಿಂದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಸಾಗಾಣಿಕಾ ವಾಹನದಲ್ಲಿ 5-6 ದನಗಳಿಗೆ ಮಾತ್ರ ಅವಕಾಶವಿದ್ದು, ಜಾನುವಾರುಗಳಿಗೆ ಅಗತ್ಯವಿರುವ ಆಹಾರ ಮತ್ತು ನೀರಿನ ವ್ಯವಸ್ಥೆ ವಾಹನದಲ್ಲಿ ಇರಬೇಕು ಎಂದರು. ಗರ್ಭಧಾರಿತ ಜಾನುವಾರುಗಳನ್ನು ಸಾಗಾಣಿಕೆ ಮಾಡಲು ಅವಕಾಶ ನೀಡಬಾರದು. ಜಾನುವಾರುಗಳ ಸಾಗಾಣಿಕೆಯನ್ನು ಮಾಡಲು ರಾತ್ರಿ 8 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಅವಕಾಶ ಇರುವುದಿಲ್ಲ. ಬೇಸಿಗೆಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೂ ಸಹ ಸಾಗಾಣಿಕೆಯನ್ನು ನಿರ್ಭಂಧಿಸಲಾಗಿದೆ ಎಂದು ಹೇಳಿದರು.

ಈ ಕಾಯ್ದೆ ವ್ಯಾಪ್ತಿಯಲ್ಲಿ ಹಸು, ಕರು ಮತ್ತು ಹೋರಿಗಳು ಸೇರಿವೆ. 13 ವರ್ಷದೊಳಗಿನ ಎಮ್ಮೆ ಹಾಗೂ ಕೋಣಗಳನ್ನು ಸಹ ಒಳಗೊಂಡಿರುತ್ತದೆ ಎಂದು ಹೇಳಿದರು.ಗ್ರಾಮೀಣ ಭಾಗದಲ್ಲಿ ಪಶು ಚಿಕಿತ್ಸಾ ಕೇಂದ್ರಗಳ ವೈದ್ಯರು ಸಿಬ್ಬಂದಿಗಳು ಕೆಲಸದ ವೇಳೆ ತಪ್ಪದೇ ಇರಬೇಕು. ಈ ಬಗ್ಗೆ ದೂರುಗಳು ಕೇಳಿ ಬರುತ್ತಿವೆ ಎಂದ ಅವರು, ಮೇಲಾಧಿಕಾರಿಗಳು ಮೇಲಿಂದ ಮೇಲೆ ಗ್ರಾಮೀಣ ಭಾಗಗಳಿಗೆ ಭೇಟಿ ನೀಡಬೇಕು ಎಂದರು.ಈಗಾಗಲೇ ನಮ್ಮ ನೆರೆ ರಾಜ್ಯಗಳಲ್ಲಿ ಹಕ್ಕಿಜ್ವರ ಕಂಡು ಬಂದಿದೆ. ಜಿಲ್ಲೆಯಲ್ಲೂ ಹಕ್ಕಿ ಜ್ವರದ ನಿಯಂತ್ರಣದ ಬಗ್ಗೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ. ಕೆ.ವಿ, ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಶಾಸಕರಾದ ಭರತ್ ವೈ.ಶೆಟ್ಟಿ ಮತ್ತು ವೇದವ್ಯಾಸ್ ಕಾಮತ್, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.