ETV Bharat / state

ಬೆಳ್ತಂಗಡಿ ಕಾಂಗ್ರೆಸ್​ ಕಿಸಾನ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ಪ್ರಮೋದ್ ಕುಮಾರ್ ರೈ ರಾಜೀನಾಮೆ

ಬೆಳ್ತಂಗಡಿ ಕಾಂಗ್ರೆಸ್​ ಕಿಸಾನ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಪ್ರಮೋದ್ ಕುಮಾರ್ ರೈ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಕರ್ನಾಟಕ ಕಾಂಗ್ರೆಸ್​ ಕಿಸಾನ್ ಘಟಕದ ಅಧ್ಯಕ್ಷ ಶ್ರೀ ಸಚಿನ್​​​​ ಮೀಗಾ ಇವರಿಗೆ ತನ್ನ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

Pramod Kumar Rai resign
ಪ್ರಮೋದ್ ಕುಮಾರ್ ರೈ ರಾಜೀನಾಮೆ
author img

By

Published : May 28, 2020, 8:28 PM IST

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಅವರು ಕಾಂಗ್ರೆಸ್​ ಕಿಸಾನ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕಾಂಗ್ರೆಸ್​​​ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

Pramod Kumar Rai resign
ರಾಜೀನಾಮೆ ಪತ್ರ

ಈ ಬಗ್ಗೆ ಕರ್ನಾಟಕ ಕಾಂಗ್ರೆಸ್​ ಕಿಸಾನ್ ಘಟಕದ ಅಧ್ಯಕ್ಷ ಶ್ರೀ ಸಚಿನ್​​​​​ ಮೀಗಾ ಇವರಿಗೆ ತನ್ನ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಈ ಬಗ್ಗೆ ಈಟಿವಿ ಭಾರತ್​ದೊಂದಿಗೆ ಮಾತನಾಡಿದ ಅವರು ಪಕ್ಷದ ಮೇಲೆ ಹಾಗೂ ನಾಯಕರ ಮೇಲೆ ಯಾವುದೇ ರೀತಿಯಲ್ಲಿ ಅಸಮಾಧಾನ ಇಲ್ಲ. ವೈಯಕ್ತಿಕ ನೆಲೆಯಲ್ಲಿ ರಾಜೀನಾಮೆ ನೀಡುತಿದ್ದೇನೆ. ನಾನು ಪಕ್ಷದಲ್ಲಿ ಇರುವಷ್ಟು ದಿನ ನಿಷ್ಠೆಯಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ಬೇರೆ ಪಕ್ಷಕ್ಕೆ ಸೇರುವ ಬಗ್ಗೆ ಯೋಚಿಸಿಲ್ಲ. ಇನ್ನು ಅದರ ಬಗ್ಗೆ ಯೋಚಿಸಬೇಕು ಎಂದು ತಿಳಿಸಿದರು.

ಈಗಾಗಲೇ ಬೆಳ್ತಂಗಡಿ ಕಾಂಗ್ರೆಸ್​ನಲ್ಲಿ ಅಸಮಾಧಾನ ಹೊಗೆಯಾಡುತ್ತಿದ್ದು, ಹಿರಿಯ ಕಾರ್ಯಕರ್ತರನ್ನು ಬೆಳ್ತಂಗಡಿ ಕಾಂಗ್ರೆಸ್​ ಪಕ್ಷ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪ ಕೇಳಿ ಬರುತಿದೆ. ಕೆಲವು ಹಿರಿಯ ಸದಸ್ಯರುಗಳ ರಾಜೀನಾಮೆ ಇದಕ್ಕೆ ಪುಷ್ಠಿ ನೀಡುವಂತಿದ್ದು, ಇನ್ನೂ ಹಲವು ಹಿರಿಯ ಕಾಂಗ್ರೆಸ್​ ಕಾರ್ಯಕರ್ತರು ರಾಜೀನಾಮೆ ನೀಡುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.