ಬೆಳ್ತಂಗಡಿ (ದಕ್ಷಿಣ ಕನ್ನಡ) : ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಹುಟ್ಟೂರಿಗೆ ಆಗಮಿಸಿದ ಪ್ರತಾಪ್ ಸಿಂಹ ನಾಯಕ್, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.
ಮಂಡಲದ ಪರವಾಗಿ ಬಿಜೆಪಿ ಕಚೇರಿಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಉಜಿರೆ ಪೇಟೆಯಲ್ಲಿಯೂ ಹಿರಿಯ ಕಾರ್ಯಕರ್ತರು ಹಾಗೂ ಹಿತೈಷಿಗಳು ಅವರನ್ನು ಅಭಿನಂದಿಸಿದರು.
ಇವರನ್ನು ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಭವ್ಯ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಬಿಜೆಪಿಯ ಮುಖಂಡರುಗಳು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ವೇಳೆ ಉಪಸ್ಥಿತರಿದ್ದರು.