ETV Bharat / state

ನೆಟ್ಟಾರು ಕುಟುಂಬಕ್ಕೆ ನಿರ್ಮಿಸಿದ ಮನೆಯ ಗೃಹ ಪ್ರವೇಶ: ಪ್ರವೀಣ್ ನೆಟ್ಟಾರು ಪ್ರತಿಮೆ ಅನಾವರಣ - ETV Bharat kannada News

ಬಿಜೆಪಿ ವತಿಯಿಂದ‌ ನಿರ್ಮಿಸಿದ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ಇಂದು ನಡೆದಿದೆ.

Praveen Nettaru House ceremony
ಪ್ರವೀಣ್ ನೆಟ್ಟಾರು ಮನೆಯ ಗೃಹ ಪ್ರವೇಶ
author img

By

Published : Apr 27, 2023, 7:15 PM IST

ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಮನೆ ನಿರ್ಮಾಣ.

ಬೆಳ್ಳಾರೆ (ದಕ್ಷಿಣ ಕನ್ನಡ) : ಕಳೆದ ವರ್ಷ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ಬಿಜೆಪಿ ಪಕ್ಷದ ವತಿಯಿಂದ‌ ನಿರ್ಮಿಸಿದ ನೂತನ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ಇಂದು ನಡೆಯಿತು. ಬೆಳಗ್ಗೆ 8:45ಕ್ಕೆ ಗಣಪತಿ ಹವನ, ಸತ್ಯನಾರಾಯಣ ಪೂಜೆಯೊಂದಿಗೆ ಗೃಹ ಪ್ರವೇಶ ಜರುಗಿತು. ಸ್ವಾಮೀಜಿಗಳು, ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರದ ಪ್ರಮುಖರು ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.

ನೂತನ ಮನೆಯ ಸಮೀಪದಲ್ಲಿ ನಿರ್ಮಿಸಿರುವ ಪ್ರವೀಣ್ ನೆಟ್ಟಾರು ಪ್ರತಿಮೆಯನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟನೆ ಮಾಡಿದರು. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ‌ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ, ಕಾಣಿಯೂರು ಮಠದ ಶ್ರೀ ಮಹಾಬಲ ಸ್ವಾಮೀಜಿ ಅವರು ಆಗಮಿಸಿ ಆಶೀರ್ವಚನ ನೀಡಿದರು. ಹಾಗು ಆರ್‌ಎಸ್ಎಸ್ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಕಾರ್ಯಕ್ರಮಕ್ಕೆ ಆಗಮಿಸಿದ್ದು, ಇವರ ನೇತೃತ್ವದಲ್ಲಿ ಮಂಗಳ ನಿಧಿ ಸಮರ್ಪಣೆ ಕಾರ್ಯಕ್ರಮದ ಜೊತೆಗೆ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದಿಂದ ಭಜನಾ ಸಂಕೀರ್ತನೆ ನೆರವೇರಿತು. ರಾತ್ರಿ 7 ಗಂಟೆಯಿಂದ ಕಲ್ಲುರ್ಟಿ ದೈವದ ನೇಮ ನಡೆಯುತ್ತಿದೆ.

ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ 2700 ಚದರ್​ ಅಡಿ ವಿಸ್ತೀರ್ಣದಲ್ಲಿ ಸುಮಾರು 70 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ಮನೆಯನ್ನು ನಿರ್ಮಿಸಲಾಗಿದೆ. ನೂತನ ಮನೆಗೆ ‘ಪ್ರವೀಣ್ ನಿಲಯ’ ಎಂದು ಹೆಸರಿಡಲಾಗಿದೆ. ಕಳೆದ ವರ್ಷದ ನವೆಂಬರ್ 2 ರಂದು ಪ್ರವೀಣ್ ನೆಟ್ಟಾರು ಅವರ ಮನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಮುಗರೋಡಿ ಕನ್‌ಸ್ಟ್ರಕ್ಷನ್ ಕಂಪನಿ ಮನೆಯ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಕೇವಲ ಐದೂವರೆ ತಿಂಗಳಲ್ಲಿ ಹೊಸ ಮನೆಯ ಕೆಲಸ ಪೂರ್ಣವಾಗಿದೆ.

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಹರಿಹಾಯ್ದ ಕಲ್ಲಡ್ಕ ಪ್ರಭಾಕರ್ ಭಟ್ : ಗೃಹ ಪ್ರವೇಶಕ್ಕೆ ಆಗಮಿಸಿದ್ದ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಾಧ್ಯಮ ಜೊತೆ ಮಾತನಾಡಿ, ’’ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರದ ಗೃಹ ಸಚಿವ ಅಮಿತ್ ಶಾ ಮಾತನಾಡುವುದಾಗಿ ಹೇಳಿದಾಗ ಅರುಣ್ ಪುತ್ತಿಲ ಮಾತನಾಡಲು ಧಿಕ್ಕರಿಸಿದ್ದಾರೆ. ಈ ವಿಚಾರ ತಿಳಿಯದೆ ಕೆಲವು ಕಾರ್ಯಕರ್ತರು ಅವನ ಹಿಂದೆ ಓಡಾಡುತ್ತಿದ್ದಾರೆ. ಅವರಿಗೆ ಸದ್ಯದಲ್ಲೇ ಈ ವಿಚಾರ ತಿಳಿಯಲಿದೆ ಎಂದು ಪ್ರಭಾಕರ್ ಭಟ್ ಹೇಳಿದ್ದಾರೆ. ಈ ನಡುವೆ ಕಾರ್ಯಕ್ರಮದಿಂದ ಊಟ ಮಾಡಿ ನಳಿನ್‌ ಕುಮಾರ್ ಕಟೀಲ್ ಹೊರಡುವ ಸಮಯದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರೂ ಪ್ರವೀಣ್ ನೆಟ್ಟಾರು ಅವರ ಮನೆಗೆ ಆಗಮಿಸಿದ್ದು, ಪರಸ್ಪರ ಇಬ್ಬರೂ ಮುಖಾಮುಖಿ ಆದರೂ ಮಾತನಾಡಲಿಲ್ಲ.

ಇದನ್ನೂ ಓದಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಸೆಕೆ.. ಮಳೆಗಾಗಿ ದೇವಸ್ಥಾನ, ದೈವಸ್ಥಾನಗಳಲ್ಲಿ ಪ್ರಾರ್ಥನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.