ಸುಳ್ಯ(ದಕ್ಷಿಣ ಕನ್ನಡ): ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದ ಆರೋಪಿ ಶಫೀಕ್ ಬೆಳ್ಳಾರೆ ಎಂಬಾತನನ್ನು ಶುಕ್ರವಾರ ಸಂಜೆ ಮತ್ತೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಸುಳ್ಯ ನ್ಯಾಯಾಲಯದ ನ್ಯಾಯಾಧೀಶರು 15 ದಿನಗಳ ವಿಚಾರಣಾ ಹಂತದ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಈ ಹಿಂದೆ ನ್ಯಾಯಾಂಗ ಬಂಧನದಲ್ಲಿದ್ದ ಶಫೀಕ್ ಮತ್ತು ಝಕೀರ್ ಸವಣೂರು ಎಂಬುವರನ್ನು ಪೊಲೀಸರು 5 ದಿನಗಳ ಕಾಲ ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಂಡಿದ್ದರು.
ನಂತರ ಅವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಝಕೀರ್ಗೆ ನ್ಯಾಯಾಂಗ ಬಂಧನ ವಿಧಿಸಿ, ಶಫೀಕ್ನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಇದೀಗ ಮತ್ತೆ ಶಫೀಕ್‌ಗೆ ಕೂಡ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇದನ್ನೂ ಓದಿ: ಶಿಳ್ಳೆ ಹೊಡೆದ ಗಿಳಿ.. ಮಾಲೀಕರ ವಿರುದ್ಧ ಪ್ರಕರಣ ದಾಖಲು!