ಸುಳ್ಯ(ದಕ್ಷಿಣ ಕನ್ನಡ): ಬೆಳ್ಳಾರೆಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟಾರೆ ಏಳು ಆರೋಪಿಗಳನ್ನು ಇಲ್ಲಿಯತನಕ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸುಳ್ಯ ಟೌನ್ನ ಜಟ್ಟಿಪಳ್ಳ ನಿವಾಸಿ ಅಬ್ಬಾಸ್ ಎಂಬುವರ ಪುತ್ರ ಅಬ್ದುಲ್ ಕಬೀರ್ ಸಿ.ಎ (33) ಎಂದು ಗುರುತಿಸಲಾಗಿದೆ.
ಹತ್ಯೆಗೆ ಯೋಜನೆ ರೂಪಿಸಿದ ಆರೋಪದಲ್ಲಿ ಈತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಒಟ್ಟು ಏಳು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ.
ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಎಲ್ಲಾ ಆರೋಪಿಗಳನ್ನು ಗುರುತಿಸಲಾಗಿದೆ. ಅವರಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು