ಸುಳ್ಯ(ದಕ್ಷಿಣ ಕನ್ನಡ): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಕರ್ತವ್ಯಕ್ಕೆ ಹಾಜರಾದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೂತನ ಅವರು ನೇಮಕಾತಿ ಆದೇಶ ಪತ್ರ ಸ್ವೀಕರಿಸಿದರು.
ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬಳಿಕ ಪ್ರವೀಣ್ ಅವರ ಪತ್ನಿ ನೂತನಗೆ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಸಿ ಗ್ರೂಪ್ ಹುದ್ದೆಗೆ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಪ್ರವೀಣ್ ಕೊಲೆ ನಡೆದ ಕೆಲ ದಿನಗಳ ಬಳಿಕ ದೊಡ್ಡಬಳ್ಳಾಪುರದಲ್ಲಿ ಜರುಗಿದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ನೂತನ ಅವರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಇದೀಗ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ನೂತನ ಅವರು ಕರ್ತವ್ಯ ನಿರ್ವಹಿಸಲಿದ್ದಾರೆ.
ಇದನ್ನೂ ಓದಿ: ಗ್ರೂಪ್ ಸಿ ಹುದ್ದೆ ನೀಡಿದ್ದಕ್ಕೆ ಪಕ್ಷ, ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ