ETV Bharat / state

ನೂತನ ಶಾಸಕರ ತರಬೇತಿ ಶಿಬಿರದ ಬಗ್ಗೆ ಪೂರ್ವಾಗ್ರಹಪೀಡಿತ ಹೇಳಿಕೆ ಸರಿಯಲ್ಲ: ಸ್ಪೀಕರ್ ಯು.ಟಿ. ಖಾದರ್ - ಸ್ಪೀಕರ್ ಯು ಟಿ ಖಾದರ್

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ ನಡೆಸುವ ಸಂದರ್ಭದಲ್ಲಿ ಏನಾದರೂ ಕುಂದು ಕೊರತೆಗಳಿದ್ದಲ್ಲಿ ಸಲಹೆ, ಸೂಚನೆಗಳನ್ನು ನೀಡಿದ್ದಲ್ಲಿ ಸರಿಪಡಿಸುತ್ತೇವೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.

ಸ್ಪೀಕರ್ ಯು ಟಿ ಖಾದರ್
ಸ್ಪೀಕರ್ ಯು ಟಿ ಖಾದರ್
author img

By

Published : Jun 23, 2023, 6:59 PM IST

ಸ್ಪೀಕರ್ ಯು.ಟಿ. ಖಾದರ್ ಹೇಳಿಕೆ

ಮಂಗಳೂರು : ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ ನಡೆಸುವ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಧ್ಯಾತ್ಮಿಕ ಚಿಂತಕರಿಗೆ ಆಹ್ವಾನ ನೀಡಿದ್ದೇವೆ. ಎಲ್ಲ ಸಂಪನ್ಮೂಲ ವ್ಯಕ್ತಿಗಳು ಇನ್ನೂ ನಮಗೆ ಸಮ್ಮತಿ ಸೂಚಿಸಿಲ್ಲ. ಕೆಲವರು ಮಾತ್ರ ಒಪ್ಪಿಗೆ ನೀಡಿದ್ದಾರೆ. ಇವರ ಭಾಗವಹಿಸುವಿಕೆ ಬಗ್ಗೆ ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಈ ಬಗ್ಗೆ ಈಗಾಗಲೇ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ವ್ಯತಿರಿಕ್ತವಾದ ಮಾತುಗಳು ಕೇಳಿಬರುತ್ತಿದೆ. ತರಬೇತಿ ಶಿಬಿರವನ್ನು ನೋಡದೇ ಈಗಲೇ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ಮಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ತರಬೇತಿ ಶಿಬಿರದಲ್ಲಿ ಏನಾದರೂ ಕುಂದು- ಕೊರತೆಗಳಿದ್ದಲ್ಲಿ ಸಲಹೆ, ಸೂಚನೆಗಳನ್ನು ನೀಡಿದ್ದಲ್ಲಿ ಸರಿಪಡಿಸುತ್ತೇವೆ. ಈಗಲೇ ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ತಪ್ಪು. ಶ್ರೀ ರವಿಶಂಕರ್ ಗುರೂಜಿಯವರನ್ನು ನಾನು ಭೇಟಿ ಮಾಡಿದ ತಕ್ಷಣ ಶಾಸಕರ ತರಬೇತಿ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ ಎಂದು ಗುಲ್ಲೆಬ್ಬಿಸುವುದು ತಪ್ಪು.

ಇದನ್ನೂ ಓದಿ: ಸಂಘಟನೆ, ಸಾಧನೆ ಮತ್ತು ನಾಯಕತ್ವದ ಮೂಲಕ ಲೋಕಸಭೆ ಚುನಾವಣೆ ಎದುರಿಸುತ್ತೇವೆ: ಕೆ.ಎಸ್.ಈಶ್ವರಪ್ಪ

ನನಗೆ ಹಿಂದಿನಿಂದಲೂ ಅವರೊಂದಿಗೆ ಆತ್ಮೀಯತೆ ಇದೆ. ಅವರ ಒಡನಾಡಿಯಾಗಿದ್ದೇನೆ. ಅಲ್ಲದೆ ಅವರು ಈಗ ಅಮೆರಿಕದಲ್ಲಿ ದೊಡ್ಡಮಟ್ಟದ ಕಾರ್ಯಕ್ರಮದಲ್ಲಿದ್ದಾರೆ. ದೇಶದಲ್ಲಿಯೇ ಇಲ್ಲದ ಅವರ ಬಗ್ಗೆ ಇಲ್ಲಸಲ್ಲದ ಮಾತನಾಡುವುದು ಸರಿಯಲ್ಲ ಎಂದರು.

ಇದನ್ನೂ ಓದಿ: ಮೋದಿ ಅಮೆರಿಕ ಭೇಟಿ ವೇಳೆ ಬೆಂಗಳೂರಿಗೆ ಭರ್ಜರಿ ಕೊಡುಗೆ: ಅಗತ್ಯ ಸಹಕಾರ ನೀಡಿ ಎಂದ ತೇಜಸ್ವಿ ಸೂರ್ಯ

ಈ ಬಗ್ಗೆ ನನ್ನಲ್ಲಿ ಸ್ಪಷ್ಟೀಕರಣ ಕೇಳದೆ ಹೇಳಿಕೆಗಳನ್ನು ಕೊಡುವವರಿಗೆ ನಾನೇನು ಹೇಳಲು ಹೋಗುವುದಿಲ್ಲ. ಆದ್ದರಿಂದ ತರಬೇತಿ ಕ್ಯಾಂಪ್ ಮುಗಿದ ಬಳಿಕ ಅದರ ಸಾಧಕ- ಬಾಧಕಗಳು, ಸಲಹೆ- ಸೂಚನೆಗಳನ್ನು ನೀಡಿದರೆ ಅದನ್ನು ಸ್ವಾಗತಿಸಲು ತಯಾರಿದ್ದೇವೆ‌ ಎಂದು ಯು.ಟಿ. ಖಾದರ್ ಹೇಳಿದರು‌.

ಇದನ್ನೂ ಓದಿ: ಅಕ್ಕಿ ವಿತರಣೆಗೆ ಒಂದೆರಡು ತಿಂಗಳು ತಡವಾದರೆ ಸಮಸ್ಯೆ ಏನೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ತರಬೇತಿ ಶಿಬಿರದಲ್ಲಿ ನೂತನ ಶಾಸಕರಿಗೆ ವಿವಿಧ ವಿಷಯಗಳ ಬಗ್ಗೆ ತರಬೇತಿ ನೀಡಲು ಹೆಚ್.ಕೆ.ಪಾಟೀಲ್, ಬಿ.ಎಲ್.ಶಂಕರ್, ಕೃಷ್ಣ ಬೈರೇಗೌಡ, ಟಿ.ಬಿ. ಜಯಚಂದ್ರ ಅವರನ್ನು ಆಹ್ವಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಕುಮಾರಸ್ವಾಮಿ ಅವರನ್ನೂ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಲಂಚ ಪಡೆದರೆ ಪರವಾನಗಿ ರದ್ದು: ಡಿ.ಕೆ.ಶಿವಕುಮಾರ್​ ಎಚ್ಚರಿಕೆ

ಗೃಹಲಕ್ಷ್ಮಿ ಯೋಜನೆ: ಇನ್ನೊಂದೆಡೆ, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್ ಸಮಸ್ಯೆ ನೋಡುತ್ತಿದ್ದೀರಿ. ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್​ಲೈನ್ ಹಾಗೂ ಆಫ್‌ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ವಿಚಾರವಾಗಿ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದೇನೆ: ವಿ. ಸೋಮಣ್ಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.