ಪುತ್ತೂರು: ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಭಜನಾ ಸಂಭ್ರಮ ಎಂಬ ಖ್ಯಾತಿಗೆ ಒಳಗಾಗಲಿರುವ ಫೆ.8 ರಂದು ಪುತ್ತೂರಿನಲ್ಲಿ ಜರುಗಲಿರುವ ಭಜನಾ ಸತ್ಸಂಗ ಸಮಾವೇಶ ಕೋಟಿ ಶಿವ ಪಂಚಾಕ್ಷರಿ ಪಠಣ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪರಿಶೀಲಿಸಿದರು.
ಅಭೂತಪೂರ್ವ ಸಿದ್ಧತೆಗೆ ಮೆಚ್ಚುಗೆ ಸೂಚಿಸಿದ ಅವರು, ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೇಳಿಕೊಂಡರು.
ಈ ಸಮಯದಲ್ಲಿ ಸತ್ಸಂಗ ಸಮಾವೇಶ ಸಮಿತಿ ಅಧ್ಯಕ್ಷ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಕಾರ್ಯಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಆರ್ಥಿಕ ಸಮಿತಿ ಸಂಚಾಲಕ ಶಶಿಕುಮಾರ್ ರೈ ಬಾಲ್ಯೊಟ್ಟು, ಧರ್ಮಸ್ಥಳ ಭಜನಾ ಪರಿಷತ್ತಿನ ಮುಖಂಡ ಜಯರಾಮ ನೆಲ್ಲಿತ್ತಾಯ ಹಾಜರಿದ್ದರು.