ETV Bharat / state

3 ದಿನಗಳ ಪ್ರವಾಸ ಮುಗಿಸಿದ ಪ್ರಥಮ ಪ್ರಜೆ: ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಯತ್ತ ಪ್ರಯಾಣ ಬೆಳೆಸಿದ ರಾಷ್ಟ್ರಪತಿ

ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪುಸ್ತಕವೊಂದನ್ನು ಕಾಣಿಕೆಯಾಗಿ ನೀಡಿದರು.

president-ram-nath-kovind-return-back-to-delhi
ದೆಹಲಿಯತ್ತ ಪ್ರಯಾಣ ಬೆಳೆಸಿದ ರಾಷ್ಟ್ರಪತಿ
author img

By

Published : Oct 8, 2021, 8:45 PM IST

ಮಂಗಳೂರು: ಮೂರು ದಿನಗಳ ರಾಜ್ಯದ ಪ್ರವಾಸದಲ್ಲಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಕುಟುಂಬ ಶುಕ್ರವಾರ ಸಂಜೆ ಪ್ರವಾಸ ಮುಗಿಸಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದರು.

president-ram-nath-kovind-return-back-to-delhi
ದೆಹಲಿಯತ್ತ ಪ್ರಯಾಣ ಬೆಳೆಸಿದ ರಾಷ್ಟ್ರಪತಿ

ಈ ಸಂದರ್ಭದಲ್ಲಿ ರಾಷ್ಟ್ರಪತಿಯವರಿಗೆ ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಇದ್ದರು.

ಅಲ್ಲದೇ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಡಿಜಿಪಿ ಜಿತೇಂದ್ರ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್, ರಾಷ್ಟ್ರಪತಿ ಭವನದ ಅಧಿಕಾರಿ ಸಿಬ್ಬಂದಿ ಹಾಗೂ ಇತರರು ಇದ್ದರು. ಇದೇ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರಪತಿಯವರಿಗೆ ಪುಸ್ತಕವೊಂದನ್ನು ಕಾಣಿಕೆಯಾಗಿ ನೀಡಿದರು.

ಓದಿ: ಕೊನೆಗೂ ಎಚ್ಚೆತ್ತುಕೊಂಡ BBMP: ರಾಜಧಾನಿಯ ಎಲ್ಲ ಕಟ್ಟಡಗಳ ಸರ್ವೆಗೆ ಕಮಿಷನರ್​​​​ ಸೂಚನೆ..!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.