ETV Bharat / state

ಮೂಡುಬಿದಿರೆ: ಇಬ್ಬರು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ - ರಾಷ್ಟ್ರಪತಿ ಪದಕ

ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಪ್ರವೀಣ್ ಮತ್ತು ಪ್ರಮುಖ ಅಗ್ನಿಶಾಮಕರಾಗಿ ಸೇವೆ ಸಲ್ಲಿಸುತ್ತಿರುವ ಯೋಗೀಶ್ ಪಿ. ಬಂಗೇರ ಅವರು ರಾಷ್ಟ್ರಪತಿ ಪದಕ ಪಡೆದಿದ್ದಾರೆ.

President's Medal for agnishamaka officers
ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
author img

By

Published : Jan 26, 2021, 3:35 PM IST

ಮಂಗಳೂರು: ಮೂಡುಬಿದಿರೆ ತಾಲೂಕಿನ ಅಗ್ನಿಶಾಮಕ ದಳದ ಇಬ್ಬರು ಅಧಿಕಾರಿಗಳು ರಾಷ್ಟ್ರಪತಿ ಪದಕ ಪುರಸ್ಕೃತರಾಗಿದ್ದಾರೆ.

ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರವೀಣ್ ಮತ್ತು ಪ್ರಮುಖ ಅಗ್ನಿಶಾಮಕರಾಗಿ ಸೇವೆ ಸಲ್ಲಿಸುತ್ತಿರುವ ಯೋಗೀಶ್ ಪಿ. ಬಂಗೇರ ಅವರು ರಾಷ್ಟ್ರಪತಿ ಪದಕ ಪಡೆದಿದ್ದಾರೆ.

ಪ್ರವೀಣ್ ಅಗ್ನಿಶಾಮಕ ದಳದಲ್ಲಿ ಕಳೆದ 38 ವರ್ಷಗಳಿಂದ ರಾಜ್ಯದ ನಾನಾ ಕಡೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ಮೂಡುಬಿದಿರೆ ಅಗ್ನಿಶಾಮಕ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಹಾಗೆಯೇ ಯೋಗೀಶ್ ಬಂಗೇರ ಕಳೆದ 28 ವರ್ಷಗಳಿಂದ ಅಗ್ನಿಶಾಮಕ ಠಾಣೆಯ ವಿವಿಧ ಕಡೆಗಳಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದು, ಇದೀಗ ಮೂಡುಬಿದಿರೆಯ ಅಗ್ನಿಶಾಮಕದಲ್ಲಿ ಪ್ರಮುಖ ಅಗ್ನಿಶಾಮಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇವರಿಬ್ಬರ ಸೇವೆಯನ್ನು ಗುರುತಿಸಿ ರಾಷ್ಟ್ರಪತಿ ಪದಕಕ್ಕೆ ಆಯ್ಕೆ ಮಾಡಿದ್ದು,‌ ಇಂದು ಪದಕ ಸ್ವೀಕರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.