ETV Bharat / state

ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆ

ಪ್ರಧಾನಿ ನರೇಂದ್ರ ಮೋದಿ ಸೆ. 2 ರಂದು ಕರಾವಳಿ ನಗರಿ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಇಂದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆ ನಡೆಯಿತು.

author img

By

Published : Aug 25, 2022, 5:15 PM IST

Prime Minister Modi coming to Mangalore
ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆ

ಮಂಗಳೂರು: ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು ಇಂದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆ ನಡೆಯಿತು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವ ವಿ ಸುನೀಲ್ ಕುಮಾರ್, ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್, ಎಸ್ ಪಿ ಸೇರಿದಂತೆ ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳಿದ್ದರು.

ಅಧಿಕಾರಿಗಳಿಗೆ ಸೂಚನೆ: ಪ್ರಧಾನಮಂತ್ರಿಯವರ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳನ್ನು ಕರೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಭದ್ರತೆಯ ಬಗ್ಗೆ ಪೊಲೀಸರ ಜೊತೆಗೆ ಚರ್ಚಿಸಲಾಗಿದೆ. ನವಮಂಗಳೂರು ಬಂದರಿನಲ್ಲಿ ಕೇಂದ್ರ ಸರ್ಕಾರದ 3,600 ಕೋಟಿ ಯೋಜನೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಬಳಿಕ ಗೋಲ್ಡ್ ಪಿಂಚ್ ಸಿಟಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ

27 ಸಾವಿರ ಕೋಟಿ ರೂ ಅನುದಾನ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, 2014 ರಿಂದ 2022 ವರೆಗೆ ಮೋದಿಯವರು 27 ಸಾವಿರ ಕೋಟಿ ರೂ ಅನುದಾನವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಕೊಟ್ಟಿದ್ದಾರೆ. 14 ಮತ್ತು 15 ಹಣಕಾಸು ಅವಧಿಯಲ್ಲಿ ಪಂಚಾಯತ್ ಗಳಿಗೆ, ರಾಷ್ಟ್ರೀಯ ಹೆದ್ದಾರಿ, ರೈಲ್ವೆ, ಬಂದರು ಹೀಗೆ ವಿವಿಧ ಯೋಜನೆಯಡಿ ಅನುದಾನಗಳು ಬಂದಿವೆ ಎಂದರು.

ಗೋಲ್ಡ್ ಫಿಂಚ್ ಸಿಟಿಯಲ್ಲಿ ಕಾರ್ಯಕ್ರಮ: ಮನೆ-ಮನೆಗೆ ಗಂಗೆ ಯೋಜನೆ ಯಶಸ್ವಿಯಾಗಿ ಅನುಷ್ಠಾನವಾಗುತ್ತಿದೆ. 3,500 ಕೋಟಿ ಬಂದರು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಟೆಂಡರ್ ಆಗಿದೆ. ಕೋಸ್ಟ್ ಗಾರ್ಡ್ ಕಾರ್ಯ ಆರಂಭವಾಗಿದೆ. ಈ ಎಲ್ಲಾ ಯೋಜನೆಗಳನ್ನು ಕೊಟ್ಟ ಪ್ರಧಾನಿಗಳು ಮೊದಲ ಬಾರಿಗೆ ಸರಕಾರಿ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಬರುತ್ತಿದ್ದಾರೆ. ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಒಂದು ಲಕ್ಷ ಜನ ಕೂರಲು‌ ಪೆಂಡಾಲ್ ಹಾಕಲಾಗುತ್ತದೆ. ಎರಡು ಯೋಜನೆ ಎಂಆರ್​ಪಿಎಲ್ ಮತ್ತು ಒಂದು ಯೋಜನೆ ಎನ್​ಎಂಪಿಟಿ ಯದು ಅಂದು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಸೆಪ್ಟೆಂಬರ್ 2ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ

ಫಲಾನುಭವಿಗಳ ಪಟ್ಟಿ ಶೀಘ್ರದಲ್ಲೇ ತಯಾರಿ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಸರಿ ಸುಮಾರು 10 ಲಕ್ಷ ಫಲಾನುಭವಿಗಳಿದ್ದಾರೆ. ಅವರು ಪ್ರಧಾನಿಯವರ ಕಾರ್ಯಕ್ರಮದಲ್ಲಿ ಹಾಜರಿರುವಂತೆ ವೈಯುಕ್ತಿಕ ಆಮಂತ್ರಣ ಪತ್ರಿಕೆ ನೀಡಲಿದ್ದೇವೆ. ಫಲಾನುಭವಿಗಳ ಪಟ್ಟಿಯನ್ನು ಶೀಘ್ರದಲ್ಲೇ ತಯಾರಿಸಲಾಗುತ್ತದೆ. ಆ ಬಳಿಕ ಯಾವ ತಾಲೂಕುಗಳಿಂದ ಎಷ್ಟು ಫಲಾನುಭವಿಗಳು ಬರಬೇಕೆಂಬುದನ್ನು ನಿಶ್ಚಯಿಸಲಾಗುತ್ತದೆ. ಲಕ್ಷಕ್ಕೂ ಕಡಿಮೆಯಿಲ್ಲದಂತೆ ದೊಡ್ಡ ಮಟ್ಟದಲ್ಲಿ ಸಭೆ ನಡೆಸಲಾಗುತ್ತದೆ ಎಂದರು.

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಬಳಿಕ ಬಿಜೆಪಿ ವಿರುದ್ಧ ಕಾರ್ಯಕರ್ತರೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಮೇಲೆಯೂ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಆಗಮಿಸುತ್ತಿರುವುದು ರಾಜ್ಯ ಬಿಜೆಪಿಯಲ್ಲಿ ಹುರುಪು ಮೂಡಿಸಲಿದೆ ಎನ್ನಲಾಗ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.