ETV Bharat / state

ವೆನ್ಲಾಕ್‌ ಆಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿಚಾರಣಾಧೀನ ಕೈದಿ - Wenlock hospital

ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದಿದೆ.

prisoner attempts to suicide in Wenlock hospital
ಆತ್ಮಹತ್ಯೆಗೆ ಯತ್ನ
author img

By

Published : Nov 8, 2021, 8:23 PM IST

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮೂವರು ಮಹಿಳೆಯರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವಿಚಾರಣಾಧೀನ ಕೈದಿಯಾಗಿದ್ದ ಕುಂದಾಪುರದ ನವೀನ್ (31) ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದಾತ.

ಈತ ಶಿಕ್ಷಕಿ‌ಯೋರ್ವರು ತನಗೆ ಮಾಟ ಮಾಡಿದ್ದಾರೆಂದು ಗ್ರಹಿಸಿ ಸೆ.20ರಂದು ನಗರದ ಕೊಡಿಯಾಲ್‌ಬೈಲ್​​​ನಲ್ಲಿರುವ ಡಯಟ್ ಶಿಕ್ಷಣ ಸಂಸ್ಥೆಗೆ ನುಗ್ಗಿ ಮೂವರು ಮಹಿಳೆಯರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ತಕ್ಷಣ ನವೀನ್ ನನ್ನು ಬಂಧಿಸಿದ ಪೊಲೀಸರು ಈತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು.

ಇಂದು ಸಂಜೆ ಆತ ವೆನ್ಲಾಕ್ ಆಸ್ಪತ್ರೆಯಲ್ಲಿನ ಕಿಟಕಿಗೆ ಬೆಡ್ ಶೀಟ್​​ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಆತನಿಗೆ ಚಿಕಿತ್ಸೆ ಕೊಡಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ:ಚಾಕು ತೋರಿಸಿ ಚಿನ್ನದ ಸರ ಕಳವು: ಸರಗಳ್ಳನ ಹಿಡಿದು ಪೊಲೀಸ್​ ವಶಕ್ಕೆ ನೀಡಿದ ಜನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.