ETV Bharat / state

ನಾಳೆ ಪ್ರಿಯಾಂಕಾ ಗಾಂಧಿ ಮಂಗಳೂರು ಭೇಟಿ.. ಮೂಲ್ಕಿಯಲ್ಲಿ ಕಾಂಗ್ರೆಸ್ ಪರ ಪ್ರಚಾರ - ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ

ಮೂಡಬಿದಿರೆ ಕ್ಷೇತ್ರದ ಮೂಲ್ಕಿಯಲ್ಲಿ ನಾಳೆ ನಡೆಯುವ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗವಹಿಸಿ ಮಂಗಳೂರು ಉತ್ತರ, ಮೂಡಬಿದಿರೆ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.

Congress leader Priyanka Gandhi
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ
author img

By

Published : May 6, 2023, 4:17 PM IST

ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಭಾನುವಾರ ಕರಾವಳಿ ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಪ್ರಿಯಾಂಕಾ ಗಾಂಧಿ ಮಂಗಳೂರಿಗೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

ನಾಳೆ ಮಧ್ಯಾಹ್ನ ಹೆಲಿಕಾಪ್ಟರ್​​ನಲ್ಲಿ ಆಗಮಿಸುವ ಪ್ರಿಯಾಂಕಾ ಗಾಂಧಿ, ಮೂಡಬಿದಿರೆ ಕ್ಷೇತ್ರದ ಮೂಲ್ಕಿಯಲ್ಲಿ ಚುನಾವಣಾ ಮತಬೇಟೆ ನಡೆಸಲಿದ್ದಾರೆ. ಮುಲ್ಕಿಯ ಕೊಳ್ನಾಡುವಿನ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಹಮ್ಮಿಕೊಂಡಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಮಂಗಳೂರು ಉತ್ತರ, ಮೂಡಬಿದಿರೆ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಈ ಹಿಂದೊಮ್ಮೆ ಆಗಮಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ಬಳಿಕ ಮೊದಲ ಬಾರಿಗೆ ಬರುತ್ತಿದ್ದಾರೆ. ಈ ಹಿನ್ನೆಲೆ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿರ್ಧರಿಸಿದೆ. ವಿಧಾನಸಭಾ ಚುನಾವಣಾ ಪ್ರಚಾರ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಗೆ ಈಗಾಗಲೇ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಬಿಜೆಪಿ ಪರ ಪ್ರಧಾನಮಂತ್ರಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ ಕೈಗೊಂಡಿದ್ದರು. ಜೆಡಿಎಸ್ ನಿಂದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಮತಬೇಟೆ ನಡೆಸಿದ್ದರು.

ಹಾವೇರಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ.. ರಾಜ್ಯದಲ್ಲಿರುವ ಬಿಜೆಪಿ ಸರ್ಕಾರದ ಏಕೈಕ ಆಲೋಚನೆ ಶೇ 40 ಲಂಚ ಪಡೆಯುವುದು ಎಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದರು. ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಅವರು, ಪಿಎಸ್ಐ ಹಗರಣ, ಗುತ್ತಿಗೆದಾರನ ಆತ್ಮಹತ್ಯೆ, ರೈತರ ಆತ್ಮಹತ್ಯೆ, ಬೆಲೆ ಏರಿಕೆ ಸೇರಿದಂತೆ ಇನ್ನೂ ಅನೇಕ ಸಮಸ್ಯೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಶಾಲಾ ಮಕ್ಕಳಿಗೆ ಪೂರೈಕೆ ಮಾಡುವ ಮೊಟ್ಟೆಯಲ್ಲಿಯೂ ಭ್ರಷ್ಟಾಚಾರ ಮಾಡಿದ್ದಾರೆ ಎಂದು ದೂರಿದರು.

ಬಿಜೆಪಿ ನಾಯಕರ ಭ್ರಷ್ಟಾಚಾರದ ಹಣ ಸದುಪಯೋಗ ಆಗಿದ್ದರೆ, 30 ಸಾವಿರ ಸ್ಮಾರ್ಟ್ ಕ್ಲಾಸ್ ಮಾಡಬಹುದಿತ್ತು. 30 ಲಕ್ಷ ಬಡ ಜನರಿಗೆ ಸಂಪೂರ್ಣವಾಗಿ ಉಚಿತ ಮನೆ ನಿರ್ಮಿಸಬಹುದಿತ್ತು. 100 ಸುಸಜ್ಜಿತ ಆಸ್ಪತ್ರೆಗಳೊಂದಿಗೆ 100ಕ್ಕೂ ಅಧಿಕ ಏಮ್ಸ್ ಆಸ್ಪತ್ರೆ, ಬೆಂಗಳೂರಿನಲ್ಲಿ ಮೆಟ್ರೋ ಯೋಜನೆಯನ್ನು ನಗರದ ತುಂಬಾ ಮಾಡಿ, ನಿಮ್ಮ ಅಭಿವೃದ್ದಿಗೂ ಬಳಸಬಹುದಿತ್ತು ಎಂದು ಪ್ರಿಯಾಂಕಾ ಹೇಳಿದ್ರು.

ಕಾಂಗ್ರೆಸ್ ಸರ್ಕಾರವಿದ್ದಾಗ ನಂದಿನಿ ಸಂಸ್ಥೆ ಸಾಕಷ್ಟು ಹಾಲು ಉತ್ಪನ್ನಗಳನ್ನು ಉತ್ಪಾದಿಸುತ್ತಿತ್ತು. ರೈತರಿಗೆ ಉತ್ತಮ ದರ ಸಿಗುತ್ತಿತ್ತು. ಆದರೆ ಈಗ ನಂದಿನಿ ಬಿಟ್ಟು ಗುಜರಾತ್‌ನಿಂದ ಅಮೂಲ್‌ ತರುತ್ತೇವೆ ಎನ್ನುತ್ತಿದ್ದಾರೆ. ಉತ್ತಮ ಕಾರ್ಯ ನಿರ್ವಹಿಸುತ್ತಿದ್ದ ರಾಜ್ಯದ ನಂದಿನಿಯನ್ನು ನಷ್ಟಕ್ಕೆ ಸಿಲುಕಿಸಿ ಗುಜರಾತ್‌ನ ಅಮೂಲ್ ತಂದರೆ ಅಭಿವೃದ್ದಿಯಾಗುತ್ತದೆಯಾ. ಅಮೂಲ್ ರಾಜ್ಯಕ್ಕೆ ಬಂದರೆ ಒಂದು ಕೋಟಿ ಜನರ ಪರಿಸ್ಥಿತಿ ಕೆಡುತ್ತೆ. ಇದರ ಬಗ್ಗೆ ತಲೆಕೆಡಿಸಿಕೊಳ್ಳದ ಬಿಜೆಪಿ ನಾಯಕರು ಯಾವ ಸಂಸ್ಥೆಯಿಂದ ಎಷ್ಟೆಷ್ಟು ಲೂಟಿ ಹೊಡೆಯಬಹುದೆಂಬ ಚಿಂತೆಯಲ್ಲಿ ತೊಡಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದರು.

ಇದನ್ನೂಓದಿ:ಹನೂರಲ್ಲಿ ದಳಪತಿ ಭರ್ಜರಿ ರೋಡ್ ಶೋ: ತಾಲೂಕು ದತ್ತು ವಾಗ್ದಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.