ETV Bharat / state

ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಕಾರ್ಯ ಪ್ರವೃತ್ತರಾಗಿ : ಎ.ಪೊನ್ನುರಾಜ್ - Progress review meeting of various departments at manglure

ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಅಗತ್ಯವಿರುವ ಕಾಮಗಾರಿಗೆ ಆದ್ಯತೆ ನೀಡಿ, ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು. ಮಂಗಳೂರು ನಗರ ವ್ಯಾಪ್ತಿಯಲ್ಲಿ 24x7 ಅವಧಿಯಲ್ಲಿ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ..

ಪ್ರಗತಿ ಪರಿಶೀಲನಾ ಸಭೆ
ಪ್ರಗತಿ ಪರಿಶೀಲನಾ ಸಭೆ
author img

By

Published : Jan 3, 2021, 6:29 AM IST

ಮಂಗಳೂರು : ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ವ್ಯವಸ್ಥಿತವಾಗಿ ನೀರು ಪೂರೈಕೆ ಮಾಡಲು ಕಾರ್ಯಪ್ರವೃತ್ತರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ. ಪೊನ್ನುರಾಜ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾನ್ಯವಾಗಿ ಜಿಲ್ಲೆಯಲ್ಲಿ ಪ್ರತಿವರ್ಷದ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ.

ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಅಗತ್ಯವಿರುವ ಕಾಮಗಾರಿಗೆ ಆದ್ಯತೆ ನೀಡಿ, ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು. ಮಂಗಳೂರು ನಗರ ವ್ಯಾಪ್ತಿಯಲ್ಲಿ 24x7 ಅವಧಿಯಲ್ಲಿ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ.

ಆದರೆ, ನೀರಿನ ಲಭ್ಯತೆ ಕ್ರೋಢೀಕರಿಸುವ ಕೆಲಸವಾದಾಗ ಮಾತ್ರ ಈ ಯೋಜನೆಯ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಅಪರ ಜಿಲ್ಲಾಧಿಕಾರಿ ಎಂ ಜೆ ರೂಪಾ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆರ್ ಸೆಲ್ವಮಣಿ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಕರಿಕಲಂ ಹಾಗೂ ಇತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.