ETV Bharat / state

ದ.ಕ ಜಿಲ್ಲೆಯಲ್ಲಿ ದೇವಸ್ಥಾನದ ಆವರಣದೊಳಗೆ ಮಾತ್ರ ಹುಲಿವೇಷ ಪ್ರದರ್ಶನಕ್ಕೆ ಅವಕಾಶ - Mangalore Dasara -2020

ದ.ಕ ಜಿಲ್ಲೆಯಲ್ಲಿ ಈ ಬಾರಿ ದಸರಾ ಸಂದರ್ಭದಲ್ಲಿ ದೇವಸ್ಥಾನಗಳ ಆವರಣದೊಳಗೆ ಮಾತ್ರ ಹುಲಿವೇಷ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ.

Prohibition for Public Tiger dance in DK
ದ.ಕ ದಸರಾ ಹುಲಿವೇಷಕ್ಕೆ ಮಾರ್ಗಸೂಚಿ ಪ್ರಕಟ
author img

By

Published : Oct 13, 2020, 10:50 PM IST

ಮಂಗಳೂರು : ದ.ಕ ಜಿಲ್ಲೆಯಲ್ಲಿ ದಸರಾ ಸಂದರ್ಭದಲ್ಲಿ ಹುಲಿ ವೇಷ ಪ್ರದರ್ಶನಕ್ಕೆ ದೇವಸ್ಥಾನಗಳ ಆವರಣದೊಳಗೆ ಮಾತ್ರ ಅವಕಾಶ ನೀಡಲಾಗಿದ್ದು, ದೇವಸ್ಥಾನದ ಹೊರಗೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನ ನೀಡುವುದನ್ನು ನಿರ್ಬಂಧಿಸಲಾಗಿದೆ‌.

ಕೊರೊನಾ ಕಾರಣದಿಂದ ದಸರಾ ಹುಲಿ ವೇಷ ನಿರ್ಬಂಧಿಸಬಾರದೆಂಬ ಒತ್ತಾಯ ಕೇಳಿ ಬಂದ ಹಿನ್ನೆಲೆ, ಈ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಕನಿಷ್ಠ 10 ಹುಲಿ ವೇಷಧಾರಿಗಳು ನಿಗದಿತ ಕಾಲಮಿತಿಯೊಳಗೆ ಹರಕೆ ಸಲ್ಲಿಸಲು ಮಾತ್ರ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಈ ರೀತಿ ಹರಕೆ ಸಲ್ಲಿಸುವಾಗ ಎಲ್ಲರೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಸುವಂತೆ ನೋಡಿಕೊಳ್ಳುವುದು ಸಂಬಂಧಪಟ್ಟ ದೇವಳದ ಆಡಳಿತ ಸಮಿತಿಯ ಜವಾಬ್ದಾರಿಯಾಗಿದೆ. ಮಾರ್ಗಸೂಚಿಗಳ ಉಲ್ಲಂಘನೆಯಾದಲ್ಲಿ ಅಥವಾ ಅಹಿತಕರ ಘಟನೆ ಸಂಭವಿಸಿದಲ್ಲಿ ಸಂಬಂಧಪಟ್ಟ ದೇವಳದ ಆಡಳಿತ ಸಮಿತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅದೇ ರೀತಿ ಪಟಾಕಿ ಮತ್ತು ಸುಡುಮದ್ದು ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.