ETV Bharat / state

ಘನ ತ್ಯಾಜ್ಯ ಕುಸಿತ: ಜಿಲ್ಲಾಧಿಕಾರಿ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಘನತ್ಯಾಜ್ಯ ಘಟಕ ಕುಸಿತಗೊಂಡ ಮಂದಾರ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಜಿಲ್ಲಾಧಿಕಾರಿ ಭೇಟಿ ನೀಡಿದ ಮಂದಾರ ಪ್ರದೇಶ
author img

By

Published : Sep 12, 2019, 4:01 AM IST

ಮಂಗಳೂರು: ನಗರದ ಪಚ್ಚನಾಡಿಯಲ್ಲಿರುವ ಘನತ್ಯಾಜ್ಯ ಘಟಕ ಕುಸಿತಗೊಂಡು ಆಹುತಿಯಾದ ಮಂದಾರ ಪ್ರದೇಶಕ್ಕೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಿಂಧೂ‌ ರೂಪೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.

proper solution to solid waste: DC
ಜಿಲ್ಲಾಧಿಕಾರಿ ಭೇಟಿ ನೀಡಿದ ಮಂದಾರ ಪ್ರದೇಶ

ಪಚ್ಚನಾಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಬಳಿಕ ಮಂದಾರಕ್ಕೆ ಭೇಟಿ ನೀಡಿದರು. ಅಲ್ಲಿಂದ ಮಂದಾರ ಪ್ರದೇಶದ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಆಶ್ರಯ ನೀಡಿರುವ ಕುಲಶೇಖರ ಹೌಸಿಂಗ್ ಬೋರ್ಡ್​ಗೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭ ಜಿಲ್ಲಾಡಳಿತ ಎಲ್ಲಾ ರೀತಿಯಲ್ಲಿಯೂ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಇಲ್ಲಿನ ಸಮಸ್ಯೆಗಳ ಬಗ್ಗೆ ಎರಡು ರೀತಿಯ ಯೋಜನೆ ಮಾಡಬೇಕು. ಪಚ್ಚನಾಡಿಯಲ್ಲಿ ಹಾಲಿ ಇರುವ ತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಬಗ್ಗೆ ವಿಸ್ತೃತ ಯೋಜನೆ ರೂಪಿಸಬೇಕು. ಮಂದಾರ ಸಂತ್ರಸ್ತರಿಗೆ ಪುನರ್ವಸತಿ ಸೇರಿದಂತೆ ಅಗತ್ಯ ಪರಿಹಾರ ಒದಗಿಸುವ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು. ಬಳಿಕ ಈ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದರು.

ಈ ಸಂದರ್ಭ ಮಹಾನಗರಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್, ಜಂಟಿ ಆಯುಕ್ತೆ ಗಾಯತ್ರಿ ನಾಯಕ್, ಪರಿಸರ ಅಭಿಯಂತರ ಮಧು ಉಪಸ್ಥಿತರಿದ್ದರು.

Intro:ಮಂಗಳೂರು: ನಗರದ ಪಚ್ಚನಾಡಿಯಲ್ಲಿರುವ ಘನತ್ಯಾಜ್ಯ ಘಟಕ ಕುಸಿತಗೊಂಡು ಆಹುತಿಯಾದ ಮಂದಾರ ಪ್ರದೇಶಕ್ಕೆ ಇಂದು ದ.ಕ.ಜಿಲ್ಲೆಯ ಜಿಲ್ಲಾಧಿಕಾರಿ ಸಿಂಧೂ‌ ರೂಪೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.

ಮೊದಲು ಪಚ್ಚನಾಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಬಳಿಕ ಮಂದಾರಕ್ಕೆ ಭೇಟಿ ನೀಡಿದರು. ಅಲ್ಲಿಂದ ಮಂದಾರ ಪ್ರದೇಶದ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಆಶ್ರಯ ನೀಡಿರುವ ಕುಲಶೇಖರ ಹೌಸಿಂಗ್ ಬೋರ್ಡ್ ಗೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭ ಜಿಲ್ಲಾಡಳಿತ ಎಲ್ಲಾ ರೀತಿಯಲ್ಲಿಯೂ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

Body:ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಇಲ್ಲಿನ ಸಮಸ್ಯೆಗಳ ಬಗ್ಗೆ ಎರಡು ರೀತಿಯ ಯೋಜನೆ ಮಾಡಬೇಕು. ಪಚ್ಚನಾಡಿಯಲ್ಲಿ ಹಾಲಿ ಇರುವ ತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಬಗ್ಗೆ ವಿಸ್ತ್ರತ ಯೋಜನೆ ರೂಪಿಸಬೇಕು. ಮಂದಾರ ಸಂತ್ರಸ್ತರಿಗೆ ಪುನರ್ವಸತಿ ಸೇರಿದಂತೆ ಅಗತ್ಯ ಪರಿಹಾರ ಒದಗಿಸುವ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು. ಬಳಿಕ ಈ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದರು.

ಈ ಸಂದರ್ಭ ಮಹಾನಗರಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್, ಜಂಟಿ ಆಯುಕ್ತೆ ಗಾಯತ್ರಿ ನಾಯಕ್, ಪರಿಸರ ಅಭಿಯಂತರ ಮಧು ಉಪಸ್ಥಿತರಿದ್ದರು.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.