ಮಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.
ಮೂಡುಬಿದಿರೆ ತಾಲೂಕಿನ ಕಡಂದಲೆ ನಿವಾಸಿ ಹರೀಶ್(45), ಬೊಳುವಾರು ನಿವಾಸಿ ಸಾಗರ್ (40) ಬಂಧಿತ ಆರೋಪಿಗಳು. ನಗರದ ಪಂಪ್ವೆಲ್ನಲ್ಲಿರುವ ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿದ್ದಾರೆ.
ಈ ಸಂದರ್ಭ ಲಾಡ್ಜ್ ಸಿಬ್ಬಂದಿ ಹರೀಶ್ ಹಾಗೂ ದಲ್ಲಾಳಿ ಸಾಗರ್ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಮೂವರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಈ ಕುರಿತು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.