ETV Bharat / state

ಎಸ್​ಎಸ್​ಎಲ್​ಸಿ ಮೌಲ್ಯಮಾಪನದಲ್ಲಿ ಎಡವಟ್ಟು: ತಿದ್ದಿದವರ ವಜಾಕ್ಕೆ ಸಮಾನ ಮನಸ್ಕ ನಾಗರಿಕರ ಪಟ್ಟು

ಕೊರೊನಾ ಆತಂಕದ ನಡುವೆಯೂ ವಿದ್ಯಾರ್ಥಿಗಳು ಸಮರ್ಥವಾಗಿ ಪರೀಕ್ಷೆಯನ್ನು ಎದುರಿಸಿದ್ದಾರೆ, ಆದರೆ ವಿದ್ಯಾರ್ಥಿಗಳ ಅನುತ್ತೀರ್ಣ ಪ್ರಮಾಣದಲ್ಲಿ ಮೌಲ್ಯ ಲೋಪವಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದಕ್ಕೆ ನಿದರ್ಶನವೆಂಬಂತೆ ದ.ಕ., ಉಡುಪಿ ಜಿಲ್ಲೆಯಲ್ಲಿ ಸುಮಾರು 748 ವಿದ್ಯಾರ್ಥಿಗಳು ಮರು ಮೌಲ್ಯಮಾಪನದಲ್ಲಿ ಉತ್ತೀರ್ಣರಾಗಿರುವುದು ಮೌಲ್ಯಮಾಪಕರ ಬೇಜಬ್ದಾರಿಯನ್ನು ತೋರಿಸುತ್ತದೆ.

protest-against-sslc-invigilaters-in-bantvala
ಪ್ರತಿಭಟನೆ
author img

By

Published : Sep 15, 2020, 9:01 PM IST

ಬಂಟ್ವಾಳ: ಎಸ್​ಎಸ್​ಎಲ್​ಸಿ ಉತ್ತರಪತ್ರಿಕೆ ಮೌಲ್ಯಮಾಪನದಿಂದ ಆಗಿರುವ ಅನಾಹುತಗಳ ಕುರಿತು ಸೂಕ್ತ ಕಾನೂನು ಕ್ರಮಕೈಗೊಂಡು ಮೌಲ್ಯಮಾಪಕರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ, ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯಿಂದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೊರೊನಾ ಆತಂಕದ ನಡುವೆಯೂ ವಿದ್ಯಾರ್ಥಿಗಳು ಸಮರ್ಥವಾಗಿ ಪರೀಕ್ಷೆಯನ್ನು ಎದುರಿಸಿದ್ದಾರೆ, ಆದರೆ ವಿದ್ಯಾರ್ಥಿಗಳ ಅನುತ್ತೀರ್ಣ ಪ್ರಮಾಣದಲ್ಲಿ ಮೌಲ್ಯ ಲೋಪವಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದಕ್ಕೆ ನಿದರ್ಶನವೆಂಬಂತೆ ದ.ಕ., ಉಡುಪಿ ಜಿಲ್ಲೆಯಲ್ಲಿ ಸುಮಾರು 748 ವಿದ್ಯಾರ್ಥಿಗಳು ಮರು ಮೌಲ್ಯಮಾಪನದಲ್ಲಿ ಉತ್ತೀರ್ಣರಾಗಿರುವುದು ಮೌಲ್ಯಮಾಪಕರ ಬೇಜಬ್ದಾರಿಯನ್ನು ತೋರಿಸುತ್ತದೆ. ಹೀಗಾಗಿ ಮೌಲ್ಯಮಾಪಕರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಸಮನ್ವಯ ಸಮಿತಿಯಿಂದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

ಪ್ರತಿಭಟನೆಯ ಬಳಿಕ ಮೌಲ್ಯಮಾಪಕರ ವಿರುದ್ಧ ಕ್ರಮಕ್ಕೆ ಕೈಗೊಳ್ಳುವಂತೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ಅವರ ಮೂಲಕ ರಾಜ್ಯ ಶಿಕ್ಷಣ ಸಚಿವರಿಗೆ ಮನವಿ ನೀಡಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.