ETV Bharat / state

ಬಿಜೆಪಿ ಸರ್ಕಾರದ ವೈಫಲ್ಯದಿಂದಲೇ ಹಿಂದೂ ಭಾವನೆಗಳಿಗೆ ಧಕ್ಕೆ: ಉಳ್ಳಾಲ ಬ್ಲಾಕ್ ಕಾಂಗ್ರೆಸ್

ಉಳ್ಳಾಲದ ಕೊರಗಜ್ಜ-ಗುಳಿಗಜ್ಜ ಕಟ್ಟೆಯಲ್ಲಿ ಮತ್ತು ಕೊಣಾಜೆ ಮುಲಾರದ ಗೋಪಾಲಕೃಷ್ಣ ಮಂದಿರದಲ್ಲಿ ದುಷ್ಕೃತ್ಯ ಎಸಗಿದ ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಉಳ್ಳಾಲ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ullala congress block protest
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
author img

By

Published : Jan 25, 2021, 7:28 PM IST

ಉಳ್ಳಾಲ: ಬಿಜೆಪಿ ಸರಕಾರದ ವೈಫಲ್ಯದಿಂದ ದುಷ್ಕರ್ಮಿಗಳು ದುಷ್ಕೃತ್ಯಗಳನ್ನು ನಡೆಸುತ್ತಲೇ ಬಂದಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವೇ ಇರುವಾಗ ಬಿಜೆಪಿ ಹಾಗೂ ಅವರ ಬೆಂಬಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ವಿಚಾರ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ತಿಳಿಸಿದರು.

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಉಳ್ಳಾಲದ ಕೊರಗಜ್ಜ -ಗುಳಿಗಜ್ಜ ಕಟ್ಟೆಯಲ್ಲಿ ಮತ್ತು ಕೊಣಾಜೆ ಮುಲಾರದ ಗೋಪಾಲಕೃಷ್ಣ ಮಂದಿರದಲ್ಲಿ ಹಿಂದೂ ದೈವ-ದೇವರ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ಘಟನೆಯನ್ನು ಖಂಡಿಸಿ ಮತ್ತು ಆರೋಪಿಗಳನ್ನು ಶೀಘ್ರವೇ ಪೊಲೀಸ್ ಇಲಾಖೆ ಬಂಧಿಸುವಂತೆ ಆಗ್ರಹಿಸಿ ತೊಕ್ಕೊಟ್ಟು ಬಸ್ಸು ನಿಲ್ದಾಣದಲ್ಲಿ ಸೋಮವಾರ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ತಮ್ಮದೇ ಕೈಯಲ್ಲಿ ಗೃಹ ಇಲಾಖೆ ಇರುವ ಸಂದರ್ಭದಲ್ಲೇ ಪ್ರತಿಭಟನೆಯನ್ನು ನಡೆಸುವ ಬಿಜೆಪಿ ಹಾಗೂ ಸಂಘ ಪರಿವಾರ, ಜನರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿವೆ. ಈ ಮೂಲಕ ಸಹೋದರತೆಯನ್ನು ಒಡೆಯುವ ಪ್ರಯತ್ನಗಳಾಗುತ್ತಿವೆ. ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ದೈವ- ದೇವಸ್ಥಾನಗಳಿಗೆ ಕಾಂಗ್ರೆಸ್ ಶಾಸಕರು ನೀಡಿದ ಕೊಡುಗೆ ಬಹಳಷ್ಟಿದೆ. ಜಾತ್ಯಾತೀತ ಮನೋಭಾವದ ಶಾಸಕರಿಂದ ಇದು ಸಾಧ್ಯವಾಗಿದೆ ಎಂದರು.

ಪ್ರತಿಭಟನೆಯಲ್ಲಿ ಉಳ್ಳಾಲ ಪುರಸಭೆ ಮಾಜಿ ಸದಸ್ಯ ದಿನೇಶ್ ರೈ, ಇಂಟಕ್ ಮುಖಂಡ ದಿನಕರ್ ಶೆಟ್ಟಿ, ತಾ.ಪಂ ಅಧ್ಯಕ್ಷ ಮೋನು ಮಲಾರ್, ಸದಸ್ಯೆ ಸುರೇಖಾ ಚಂದ್ರಹಾಸ್, ನಗರಸಭೆ ಅಧ್ಯಕ್ಷೆ ಚಿತ್ರಾ ಚಂದ್ರಕಾಂತ್, ಉಪಾಧ್ಯಕ್ಷ ಐಯೂಬ್ ಮಂಚಿಲ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಕೋಡಿಜಾಲ್, ರಮೇಶ್ ಬೋಳಿಯಾರ್ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷ: ಭಾರತದ 15 ಯೋಧರಿಗೆ ಗಾಯ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.