ETV Bharat / state

3ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ: ಹಲವರು ಅಸ್ವಸ್ಥ

author img

By

Published : Mar 18, 2021, 9:27 AM IST

ಐತ್ತೂರು ಗ್ರಾಮದ ಮೂಜುರು ನಿವಾಸಿ ಪ್ರಸಾದ್ ಎಂಬವರ ಮನೆಗೆ ಅರಣ್ಯಾಧಿಕಾರಿಗಳು ರಾತ್ರೋರಾತ್ರಿ ನುಗ್ಗಿ ದಾಂಧಲೆ ನಡೆಸಿದ್ದಾರೆ ಎನ್ನುವ ಆರೋಪ ಮಾಡಲಾಗಿತ್ತು. ಅಷ್ಟೇ ಅಲ್ಲ ಅರಣ್ಯಾಧಿಕಾರಿಗಳು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಕಡಬ ತಹಶೀಲ್​ ಕಚೇರಿ ಎದುರು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಹಾಗೂ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ವೇಳೆ ಕೆಲವರು ಅಸ್ವಸ್ಥರಾಗಿದ್ದರು. ಇಷ್ಟದರೂ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ನಿಲುವಿಕೆ ಆಕ್ರೋಶ ವ್ಯಕ್ತವಾಗಿದೆ.

ಮೂರನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ
Protest from family in front of Kadaba Tahsildar office

ಕಡಬ: ಐತ್ತೂರು ಗ್ರಾಮದ ಮೂಜುರು ನಿವಾಸಿ ಪ್ರಸಾದ್ ಎಂಬವರ ಮನೆಗೆ ಅರಣ್ಯಾಧಿಕಾರಿಗಳು ರಾತ್ರೋರಾತ್ರಿ ನುಗ್ಗಿ ದಾಂಧಲೆ ನಡೆಸಿದ್ದಾರೆ ಎನ್ನುವ ಆರೋಪದಲ್ಲಿ ಅರಣ್ಯಾಧಿಕಾರಿಗಳು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಅಗ್ರಹಿಸಿ ಕಡಬ ತಹಶೀಲ್​ ಕಚೇರಿ ಎದುರು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಮೂರನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ

ಸತ್ಯಾಗ್ರಹದಲ್ಲಿ ಪ್ರಸಾದ್ ತಂದೆ ಪದ್ಮಯ್ಯ ಗೌಡ, ತಾಯಿ ಸೀತಮ್ಮ, ಪತ್ನಿ ದೀಕ್ಷಿತಾ, ಅಣ್ಣ, ಅತ್ತಿಗೆ, ನೀತಿ ತಂಡದ ರಾಜ್ಯಾಧ್ಯಕ್ಷ ಜಯನ್.ಟಿ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದಾರೆ. ಉಪವಾಸ ಆರಂಭಿಸಿ ಮೂರು ದಿನಗಳು ಕಳೆದಿವೆ. ಈ ವೇಳೆ, ನಿನ್ನೆ ಪ್ರಸಾದ್ ಅವರ ತಾಯಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಸೀತಮ್ಮನವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಸ್ವಲ್ಪ ಚೇತರಿಸಿಕೊಂಡ ಬಳಿಕ ಅವರು ಮತ್ತೆ ಮನೆಗೆ ತೆರಳದೆ ಮತ್ತೆ ಸತ್ಯಾಗ್ರಹ ನಡೆಯುವ ಸ್ಥಳಕ್ಕೆ ಆಗಮಿಸಿದ್ದರು.

ನಂತರ ನೀತಿ ಅಧ್ಯಕ್ಷ ಜಯನ್ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಅವರಿಗೆ ಸ್ಥಳಕ್ಕೆ ಬಂದು ಚಿಕಿತ್ಸೆ ನೀಡಲು ಸರ್ಕಾರಿ ವೈದ್ಯರು ನಿರಾಕರಿಸಿದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಬಂದು ಚಿಕಿತ್ಸೆ ನೀಡಿದ್ದಾರೆ. ಇದೀಗ ಉಪವಾಸದಲ್ಲಿ ನಿರತರಾಗಿರುವ ಮೂವರ ಸ್ಥಿತಿ ಚಿಂತಾಜನಕವಾಗಿದೆ.ಇಲ್ಲಿಯವರೆಗೆ ಪುತ್ತೂರು ಉಪ ಆಯುಕ್ತರು, ಕಡಬ ತಹಶೀಲ್ದಾರ್ ಹಾಗೂ ಕಡಬ ಠಾಣಾಧಿಕಾರಿ ಹೊರತು ಪಡಿಸಿ ಯಾವುದೇ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಸತ್ಯಾಗ್ರಹ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿಲ್ಲ. ಸ್ಥಳಕ್ಕೆ ಪುತ್ತೂರು ಎ.ಸಿ.ಯತೀಶ್ ಉಳ್ಳಾಲ್, ಕಡಬ ತಹಶೀಲ್ದಾರ್ ಹಾಗೂ ಕಡಬ ಠಾಣಾಧಿಕಾರಿ ಆಗಮಿಸಿ ಉಪವಾಸ ನಿರತರ ಮನ ಒಲಿಸುವ ಪ್ರಯತ್ನ ಮಾಡಿದರಾದರೂ ಅದಕ್ಕೆ ಒಪ್ಪದ ಸತ್ಯಾಗ್ರಹ ನಿರತರು ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಾಗುವ ತನಕ ಸತ್ಯಾಗ್ರಹ ಮುಂದುವರೆಸಿದ್ದಾರೆ.

ಓದಿ: ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕುಟುಂಬ, ವೃದ್ಧೆ ಅಸ್ವಸ್ಥ

ಅಧಿಕಾರಿಗಳ ವಿರುದ್ಧ ಹೋರಾಟಗಾರರ ಆಕ್ರೋಶ

ನೀತಿ ತಂಡದ ರಾಜ್ಯಾಧ್ಯಕ್ಷ ಜಯನ್ ಟಿ. ಮಾಧ್ಯಮಗಳೊಂದಿಗೆ ಮಾತನಾಡಿ, ಬಿಳಿನೆಲೆ ರಕ್ಷಿತಾರಣ್ಯದಲ್ಲಿ ಮರಗಳ್ಳತನವಾಗುತ್ತಿದ್ದು, ಇದರಲ್ಲಿ ಸ್ಥಳೀಯ ಅರಣ್ಯಾಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಐತ್ತೂರಿನ ಮೂಜೂರು ನಿವಾಸಿ ಪ್ರಸಾದ್ ಗೌಡರವರು ದೂರು ನೀಡಿದ್ದಾರೆ. ಇದರಿಂದ ಕೆರಳಿರುವ ಅರಣ್ಯಾಧಿಕಾರಿಗಳು ದ್ವೇಷ ಸಾಧನೆ ಮಾಡುವುದಕ್ಕಾಗಿ ದೂರುದಾರನ ಮನೆಯ ಮೇಲೆಯೇ ದಾಳಿ ನಡೆಸಿದ್ದಾರೆ. ಈ ವೇಳೆ, ಪ್ರಸಾದ್ ಅವರ ಮನೆಯ ಅಟ್ಟಕ್ಕೆ ಹಾಕಿದ್ದ ಹಲಗೆಗಳನ್ನು ಕಿತ್ತು ಪಿಕಪ್ ವಾಹನಗಳಲ್ಲಿ ತಾವೆ ತಂದಿದ್ದ ಮರಗಳೊಂದಿಗೆ ಸೇರಿಸಿ ಅಕ್ರಮ ಮರ ದಾಸ್ತಾನು ಎಂಬ ಸುಳ್ಳು ಪ್ರಕರಣದಲ್ಲಿ ಪ್ರಸಾದ್ ಅವರನ್ನು ಸಿಲುಕಿಸಿದ್ದಾರೆ. ಅರಣ್ಯಾಧಿಕಾರಿಗಳು, ಪೊಲೀಸರು ಹಾಗೂ ಇಲಾಖೇತರ ವ್ಯಕ್ತಿಗಳು ತಡರಾತ್ರಿ ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಯರ ಜೊತೆ ದರ್ಪದಿಂದ ವರ್ತಿಸಿ ದೌರ್ಜನ್ಯ ನಡೆಸಿದ್ದಾರೆ. ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಕಡಬ ಪೊಲೀಸರಿಗೆ ದೂರು ನೀಡಿದರೂ ಪ್ರಕರಣ ದಾಖಲಿಸದೆ ಅನ್ಯಾಯವೆಸಗಲಾಗಿದೆ. ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಾಗುವ ತನಕ ಸತ್ಯಾಗ್ರಹ ಮುಂದುವರಿಯಲಿದೆ. ಒಂದು ವೇಳೆ ಪ್ರಕರಣ ದಾಖಲು ಮಾಡಲು ಸಾಧ್ಯವಿಲ್ಲ ಎಂದಾದರೆ ಅದನ್ನು ಲಿಖಿತವಾಗಿ ಬರೆದುಕೊಡಬೇಕು ಎಂದು ಆಗ್ರಹಿಸಿದರು.

ಇಂದು ದಲಿತ ಸಂಘಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಪ್ರತಿಭಟನೆಗೆ ತಯಾರಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.