ETV Bharat / state

ಬೆಂಗಳೂರು ಗಲಭೆ ಖಂಡಿಸಿ ಪ್ರತಿಭಟನೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆಗ್ರಹ - Bantwala Mangalore latest news

ಬೆಂಗಳೂರು ಗಲಭೆಯನ್ನು ಖಂಡಿಸಿ ಪ್ರತಿಭಟನೆ ನಡೆಯಿತು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Protest
Protest
author img

By

Published : Aug 13, 2020, 7:59 PM IST

ಬಂಟ್ವಾಳ: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಇಂದು ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಯಿತು.

ಬೆಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಕೃತ್ಯ ಖಂಡಿಸಿ, ಸರ್ಕಾರವು ಈ ಕುರಿತು ಸೂಕ್ತ ಕ್ರಮ ಕೈಗೊಂಡು ಎನ್ಐಎ ತನಿಖೆಗೆ ಒಳಪಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಬಂಟ್ವಾಳ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಘಟನೆಗೆ ಕಾರಣವಾಗಿರುವ ಎಸ್‌ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ಶೀಘ್ರ ನಿಷೇಧಿಸಬೇಕು. ಜೊತೆಗೆ ಸ್ಥಳೀಯ ಕಾರ್ಪೋರೇಟರ್ ಮುಜಾಯಿಲ್ ಪಾಷಾ ಮತ್ತು ಇತರರನ್ನು ಬಂಧಿಸಿ ಅವರನ್ನು ವಿಚಾರಣೆಗೊಳಪಡಿಸಿ, ಉಗ್ರ ಶಿಕ್ಷೆಗೆ ಒಳಪಡಿಸಬೇಕು. ಇದೇ ವೇಳೆ, ಗಲಭೆ ನಿಯಂತ್ರಿಸುವಲ್ಲಿ ಪೊಲೀಸರ ಕಾರ್ಯಾಚರಣೆಯನ್ನು ಪ್ರತಿಭಟನಾಕಾರರು ಸಮರ್ಥಿಸಿಕೊಂಡರು. ಪೊಲೀಸರ ಗುಂಡಿಗೆ ಬಲಿಯಾದವರಿಗೆ ಪರಿಹಾರ ನೀಡಬಾರದು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಪ್ರತಿಭಟನೆಯನ್ನುದ್ದೇಶಿಸಿ ವಿಹಿಂಪ ಜಿಲ್ಲಾ ಪ್ರಮುಖ ಸರಪಾಡಿ ಅಶೋಕ ಶೆಟ್ಟಿ ಮಾತನಾಡಿ, ಬೆಂಗಳೂರಿನಲ್ಲಿ ನಡೆದ ಘಟನೆಯು ಪೂರ್ವಯೋಜಿತ ಕೃತ್ಯವಾಗಿದ್ದು, ಅತ್ಯಂತ ವ್ಯವಸ್ಥಿತವಾಗಿ ನಡೆದಿದೆ. ಹೀಗಾಗಿ ಘಟನೆಯನ್ನು ಎನ್ಐಎ ತನಿಖೆಗೆ ಒಳಪಡಿಸಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.