ETV Bharat / state

ಬುಧವಾರ ಕಣ್ಣೂರಿನಲ್ಲಿ ಪ್ರತಿಭಟನಾ ಸಮಾವೇಶ: ಬದಲಿ ರಸ್ತೆ ಸಂಚಾರಕ್ಕೆ ವ್ಯವಸ್ಥೆ - ಪ್ರತಿಭಟನಾ ಸಮಾವೇಶ ಮಂಗಳೂರು

ನಗರದಲ್ಲಿ ಬುಧವಾರ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಕಣ್ಣೂರಿನ ಮೈದಾನದಲ್ಲಿ  ಹಮ್ಮಿಕೊಂಡಿದ್ದು, ಅದಕ್ಕೆ ಪರವಾನಗಿಯನ್ನು ಪೊಲೀಸ್​ ಇಲಾಖೆ ನೀಡಿದೆ ಎಂದು ನಗರದ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದರು.

manglore
ಡಾ.ಪಿ.ಎಸ್.ಹರ್ಷ
author img

By

Published : Jan 14, 2020, 8:02 PM IST

ಮಂಗಳೂರು: ನಗರದಲ್ಲಿ ಬುಧವಾರ ಮಧ್ಯಾಹ್ನ 2.30 ರಿಂದ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಕಣ್ಣೂರಿನ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಅದಕ್ಕೆ ಪರವಾನಗಿಯನ್ನು ಪೊಲೀಸ್​ ಇಲಾಖೆ ನೀಡಿದೆ ಎಂದು ನಗರದ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದರು. ಈ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಲಿದೆ ಎಂದಿದ್ದಾರೆ.

ಗರದ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ

ಈ ಬಗ್ಗೆ ನಗರದ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಮಾತನಾಡಿ, ಬೆಳಗ್ಗೆ 8 ರಿಂದ ರಾತ್ರಿ 10 ರವರೆಗೆ ರಸ್ತೆ ಸಂಚಾರದಲ್ಲಿ ಬದಲಾವಣೆಯಾಗಲಿದೆ. ಬೆಳಗ್ಗೆ 8 ರಿಂದ ರಾತ್ರಿ 10 ರವರೆಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಎಂಆರ್ ಪಿಎಲ್ ಹಾಗೂ ಎನ್ಎಂಪಿಟಿ ಗಳಿಗೆ ಹೋಗುವ ಟ್ಯಾಂಕರ್​ಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮಂಗಳೂರಿನ ಪಂಪ್​ವೆಲ್ ಬಳಿ ರಸ್ತೆ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗುತ್ತದೆ.

ಇನ್ನು ಮುಸ್ಲಿಂ ಸೆಂಟ್ರಲ್ ಕಮಿಟಿಯವರು ಈ ಬಗ್ಗೆ ನಮಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಅವರ ಕಡೆಯಿಂದಲೂ ಸಾಕಷ್ಟು ಸ್ವಯಂ ಸೇವಕರನ್ನು ನೇಮಿಸುವುದಾಗಿ ತಿಳಿಸಿದ್ದಾರೆ‌. ಅಲ್ಲದೆ ವ್ಯವಸ್ಥಿತವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಆಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಹೇಳಿದರು.

Intro:ಮಂಗಳೂರು: ನಗರದ ಅಡ್ಯಾರ್ ಸಮೀಪದ ಶಹಾ ಗಾರ್ಡನ್ ನಲ್ಲಿ ನಾಳೆ ಮಧ್ಯಾಹ್ನ 2.30 ರಿಂದ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಲಿದೆ.

ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಮಾತನಾಡಿ, ಬೆಳಗ್ಗೆ 8ರಿಂದ ರಾತ್ರಿ 10ರವರೆಗೆ ರಸ್ತೆ ಸಂಚಾರದಲ್ಲಿ ಬದಲಾವಣೆಯಾಗಲಿದೆ. ಬೆಳಗ್ಗೆ 8ರಿಂದ ರಾತ್ರೆ 10ರವರೆಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಎಂಆರ್ ಪಿಎಲ್ ಹಾಗೂ ಎನ್ಎಂಪಿಟಿ ಗಳಿಗೆ ಹೋಗುವ ಟ್ಯಾಂಕರ್ ಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮಂಗಳೂರಿನ ಪಂಪ್ ವೆಲ್ ಬಳಿ ರಸ್ತೆ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗುತ್ತದೆ.

Body:ಮಂಗಳೂರಿನಿಂದ ಬೆಂಗಳೂರಿಗೆ ಹೋಗುವವರು ಪಂಪ್ ವೆಲ್ ನಿಂದ ನೇರ ಮುಲ್ಕಿ ಮಾರ್ಗವಾಗಿ, ಪಡುಬಿದ್ರೆ ದಾಟಿ ಕಾರ್ಕಳ, ಬೆಳ್ತಂಗಡಿ, ಶಿರಾಡಿ ಮೂಲಕ ತೆರಳ ಬಹುದು. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುವವರು ಮೆಲ್ಕಾರ್ ಮೂಲಕ ಕೊಣಾಜೆ ಮಾರ್ಗವಾಗಿ ಉಳ್ಳಾಲಕ್ಕೆ ಬರುವಂತೆ ಬದಲಿ ವ್ಯವಸ್ಥೆ ಮಾಡಲಾಗುವುದು. ಅಲ್ಲದೆ ಬಿ.ಸಿ.ರೋಡ್ ಕೈಕಂಬ, ಪೊಳಲಿ ಮಾರ್ಗವಾಗಿಯೂ ಮಂಗಳೂರಿಗೆ ಬರುವ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕ ಹಿತಾಸಕ್ತಿ ಯಿಂದ ಈ ಬದಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ‌ ಎಂದು ಡಾ.ಪಿ.ಎಸ್.ಹರ್ಷ ಹೇಳಿದರು.

ಪ್ರತಿಭಟನಾ ಸಮಾವೇಶವನ್ನು ಆಯೋಜನೆ ಮಾಡಿದವರು ಹಾಗೂ ಭಾಗವಹಿಸುವವರಿಗೆ ಪಾಲನೆ ಮಾಡಬೇಕಾದ ಸೂಕ್ತ ವಿವರಗಳನ್ನು ಈಗಾಗಲೇ ನೀಡಿದ್ದೇವೆ. ಮುಸ್ಲಿಂ ಸೆಂಟ್ರಲ್ ಕಮಿಟಿಯವರು ಈ ಬಗ್ಗೆ ನಮಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಅವರ ಕಡೆಯಿಂದಲೂ ಸಾಕಷ್ಟು ಸ್ವಯಂ ಸೇವಕರನ್ನು ನೇಮಿಸುವುದಾಗಿ ತಿಳಿಸಿದ್ದಾರೆ‌. ಅಲ್ಲದೆ ವ್ಯವಸ್ಥಿತವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಆಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಹೇಳಿದರು.

Vishwanath Panjimogaru

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.