ETV Bharat / state

ಕೇರಳ ಗಡಿ ತೆರುವುಗೊಳಿಸುವಂತೆ ಪ್ರತಿಭಟನೆ: ಕೇರಳ ಪೊಲೀಸರಿಂದ ಪ್ರತಿಭಟನಾಕಾರರ ಬಂಧನ..!

ತಲಪಾಡಿ ಗಡಿ ತೆರೆಯದ ಸರ್ಕಾರದ ನಿಲುವನ್ನು ಖಂಡಿಸಿ, ಮಂಜೇಶ್ವರ ಕಾಂಗ್ರೆಸ್ ಕಾರ್ಯಕರ್ತರು ತಲಪಾಡಿ ಗಡಿಯಲ್ಲಿ ಪ್ರತಿಭಟನೆ ನಡೆಸಿದರು.

Protest to open Kerala border
ಕೇರಳ ಗಡಿ ತೆರುವುಗೊಳಿಸುವಂತೆ ಪ್ರತಿಭಟನೆ
author img

By

Published : Aug 24, 2020, 6:13 PM IST

ಮಂಗಳೂರು: ಕೇರಳ ಗಡಿ ತೆರುವುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ರಸ್ತೆಯಲ್ಲಿ, ಮಂಜೇಶ್ವರ ಕಾಂಗ್ರೆಸ್ ಕಾರ್ಯಕರ್ತರು ಮಲಗಿ ಪ್ರತಿಭಟನೆ ನಡೆಸಿದರು.

ದೇಶದ ಎಲ್ಲಾ ಗಡಿಗಳನ್ನು ತೆರೆಯುವಂತೆ ಕೇಂದ್ರ ಸರಕಾರ ಸುತ್ತೋಲೆ ಹೊರಡಿಸಿದರೂ, ತಲಪಾಡಿ ಗಡಿ ತೆರೆಯದ ಸರ್ಕಾರದ ನಿಲುವನ್ನು ಖಂಡಿಸಿ, ತಲಪಾಡಿ ಗಡಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇರಳ ಗಡಿ ತೆರುವುಗೊಳಿಸುವಂತೆ ಪ್ರತಿಭಟನೆ

ಕೋವಿಡ್ ಮಾನದಂಡಗಳನ್ನು ಪಾಲಿಸಿಕೊಂಡು ಕಾಸರಗೋಡು ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಮಂಜೇಶ್ವರ ಬ್ಲಾಕ್ ಪಂಚಾಯಿತು ಸ್ಥಾಯಿ ಸಮಿತಿ ಅಧ್ಯಕ್ಷ ಮುಸ್ತಫಾ ಉದ್ಯಾವರ, ಇಲ್ಯಾಸ್ ತೂಮಿನಾಡು, ಮೂಸಾ, ರೌಫ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಹೆದ್ದಾರಿ ತಡೆ ಮಾಡಿ ಗಡಿ ತೆರೆಯುವಂತೆ ಘೋಷಣೆಗಳನ್ನು ಕೂಗಿದರು.

ಮಂಜೇಶ್ವರ ಠಾಣಾಧಿಕಾರಿ ರಾಘವನ್ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರನ್ನು ಬಂಧಿಸಿದರು. ಇದೇ ವೇಳೆ ಗಡಿಯನ್ನು ತೆರೆಯದಿದ್ದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರ ನೇತೃತ್ವದಲ್ಲಿ ತಲಪಾಡಿಯಲ್ಲಿ ಮುತ್ತಿಗೆ ಹಾಕಲಾಗುವುದೆಂದು ಹರ್ಷಾದ್ ವರ್ಕಾಡಿ ಎಚ್ಚರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.