ಬಂಟ್ವಾಳ: ಕೋವಿಡ್ ಹಿನ್ನೆಲೆಯಲ್ಲಿ ಲಾಕ್ಡೌನ್ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾದ ವಕೀಲ ಸಮುದಾಯಕ್ಕೆ ಆರ್ಥಿಕ ಸಹಾಯ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ವೇದಿಕೆಯಿಂದ ಬಂಟ್ವಾಳ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕಾನೂನು ವೇದಿಕೆ (ರಿ) ಮಂಗಳೂರು ಜಿಲ್ಲಾಧ್ಯಕ್ಷ ಎಸ್.ಪಿ.ಚಂಗಪ್ಪ ನೇತೃತ್ವದಲ್ಲಿ ಬಂಟ್ವಾಳದ ವಕೀಲರ ಸಂಘದ ಸದಸ್ಯರು ಸೋಮವಾರ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ತೆರಳಿ ಮನವಿ ಸಲ್ಲಿಸಿದರು.
ಬ್ಯಾಂಕುಗಳ ಮೂಲಕ ಕನಿಷ್ಠ ಬಡ್ಡಿಯಲ್ಲಿ ಸಾಲ ಬಿಡುಗಡೆ, ಯುವ ವಕೀಲರಿಗೆ ಕೊಡುವ ಪ್ರೋತ್ಸಾಹಧನ ಏರಿಕೆ, ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳಿಗೆ ಕಡ್ಡಾಯ ಕೋವಿಡ್ ಟೆಸ್ಟ್, ಅವರ ಕುಟುಂಬಸ್ಥರ ಭೇಟಿಗೆ ಅವಕಾಶ ಕೊಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.