ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಜುಲೈ 3 ರಿಂದ 5 ವರೆಗೆ ಸಾರ್ವಜನಿಕ ಪ್ರವೇಶವನ್ನು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ನಿರ್ಬಂಧಿಸಿದ್ದಾರೆ.
ದ.ಕ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲು ಉದ್ದೇಶಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಮೂರು ದಿನ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
ದ.ಕ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ದ. ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿ ಇರುವುದರಿಂದ ಅವರ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಈ ಕಾರಣದಿಂದ ಮೂರು ದಿನಗಳ ಕಾಲ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ವಿನಂತಿಸಿದ್ದಾರೆ.