ETV Bharat / state

ಕೇರಳದಲ್ಲಿ ಕೋವಿಡ್​ ಉಲ್ಬಣ : ಕಾಸರಗೋಡು ಸರ್ಕಾರಿ, ಖಾಸಗಿ ಬಸ್ ಸಂಚಾರ‌ ಸ್ಥಗಿತ

author img

By

Published : Jul 31, 2021, 10:24 PM IST

ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10ರವರೆಗೆ ನಡೆಸದಂತೆ ಕ್ರಮಕೈಗೊಳ್ಳಬೇಕು. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರು ಮಾತ್ರ ಸೀಮಿತಗೊಳಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲೀಕರ ಮೇಲೆ ಎಫ್ಐಆರ್ ದಾಖಲಿಸಬೇಕು. ಈ ಬಗ್ಗೆ ನಿಗಾವಹಿಸಲು ಹೋಂ ಗಾರ್ಡ್ ನಿಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು..

public-and-private-bus-services-in-kasargodu-closed
ನಳಿನ್ ಕುಮಾರ್ ಕಟೀಲು

ಮಂಗಳೂರು : ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾದ ಹಿನ್ನಲೆ ದ.ಕ.ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆ.1 ರಿಂದ ಒಂದು ವಾರ ಸ್ಥಗಿತಗೊಳಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದರು.

ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿಯೂ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡು ಸೋಂಕು ಹರಡದಂತೆ ಸೂಕ್ತ ಕ್ರಮಕೈಗೊಳ್ಳಬೇಕಾಗಿದೆ. ಆದ್ದರಿಂದ ನಾಗರಿಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕಿದೆ ಎಂದರು.

ಕೇರಳ ವಿದ್ಯಾರ್ಥಿಗಳಿಗೆ ಕೋವಿಡ್​ ನೆಗೆಟಿವ್​ ವರದಿ ಕಡ್ಡಾಯ

ಆದ್ದರಿಂದ ಆಗಸ್ಟ್ 1ರಿಂದ ವಾರದವರೆಗೆ ಮಂಗಳೂರಿನಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರವನ್ನು ನಿಲ್ಲಿಸಬೇಕು. ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕು. ಮುಖ್ಯವಾಗಿ ಕೇರಳದ ವಿದ್ಯಾರ್ಥಿಗಳು ಈ ಸಮಯದಲ್ಲಿ ತಾವಿರುವ ವಿದ್ಯಾರ್ಥಿ ನಿಲಯದಲ್ಲಿಯೇ ಹೋಂ ಕ್ವಾರಂಟೈನ್​ಗೆ ಒಳಗಾಗಲಿ. ಪ್ರತಿ ದಿನ ಅವರುಗಳ ಬಗ್ಗೆ ನಿಗಾವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎರಡಕ್ಕಿಂತ ಹೆಚ್ಚು ಪ್ರಕರಣ ಕಂಡು ಬಂದ್ರೆ ಮೈಕ್ರೋ ಕಂಟೈನ್ಮೆಂಟ್​​​ ಝೋನ್​​

ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ತಪಾಸಣೆಗೆ ಮತ್ತಷ್ಟು ಕ್ರಮಕೈಗೊಳ್ಳಬೇಕು. ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಬೇಕು‌. ಸೋಂಕಿತರ ಅನಗತ್ಯ ಓಡಾಟ ಕಂಡುಬಂದಲ್ಲಿ ಅಂತವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಒಂದೇ ಕುಟುಂಬದಲ್ಲಿ 2ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡು ಬಂದಲ್ಲಿ ಅಂತಹ ಮನೆಯನ್ನು ಮೈಕ್ರೋ ಕಂಟೈನ್ಮೆಂಟ್​​​ ಝೋನ್​​ ಎಂದು ಪರಿಗಣಿಸಬೇಕು ಎಂದರು.

ಆಗಸ್ಟ್​​​ 10ರವರೆಗೆ ಎಲ್ಲಾ ಕಾರ್ಯಕ್ರಮಗಳು ರದ್ದು

ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10ರವರೆಗೆ ನಡೆಸದಂತೆ ಕ್ರಮಕೈಗೊಳ್ಳಬೇಕು. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರು ಮಾತ್ರ ಸೀಮಿತಗೊಳಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲೀಕರ ಮೇಲೆ ಎಫ್ಐಆರ್ ದಾಖಲಿಸಬೇಕು. ಈ ಬಗ್ಗೆ ನಿಗಾವಹಿಸಲು ಹೋಂ ಗಾರ್ಡ್ ನಿಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾಸ್ಕ್​ ಇಲ್ಲದಿದ್ದರೆ ದಂಡ

ರಸ್ತೆಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವಂತಹ ಸಾರ್ವಜನಿಕರ ಮೇಲೆ ದಂಡ ವಿಧಿಸಬೇಕು ಹಾಗೂ ಕಡ್ಡಾಯವಾಗಿ ಮಸ್ಕ್ ಧರಿಸುವಂತೆ ತಿಳಿಸಬೇಕು ಮತ್ತು ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು ಎಂದರು. ಈ ಸಂದರ್ಭ ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಹಾಗೂ ಮಂಗಳೂರು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಶಾಸಕರುಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.