ಬೆಳ್ತಂಗಡಿ: ದಲಿತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸ್ಥಳೀಯರು ಪೊಲೀಸರಿಗೊಪ್ಪಿಸಿದ ಘಟನೆ ತಾಲೂಕಿನ ಬೆಳಾಲು ಗ್ರಾಮದ ಸುರುಳಿ ಎಂಬಲ್ಲಿ ನಡೆದಿದೆ.
ಸಲೀಂ ಬಂಧಿತ ಆರೋಪಿ. ಸಂತ್ರಸ್ತ ಯುವತಿ ಬೀಡಿ ನೀಡಲು ಸಲೀಂನ ಅಂಗಡಿಗೆ ಹೋಗಿದ್ದಳು. ಈ ವೇಳೆ ಆರೋಪಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದರಿಂದ ಭಯಗೊಂಡು ಯುವತಿ ಬೊಬ್ಬೆ ಹಾಕಿದ್ದಾಳೆ.
ಆಗ ಯುವತಿ ಕೂಗು ಹಾಕುವುದನ್ನು ಕೇಳಿದ ಸ್ಥಳೀಯರು ಹಾಗೂ ಭಜರಂಗದಳದ ಯುವಕರು ಸ್ಥಳಕ್ಕೆ ಬಂದು ಯುವತಿಯನ್ನು ರಕ್ಷಿಸಿ ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.