ETV Bharat / state

ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥ ಎಳೆಯಲು ಸೇವಾರ್ಥಿಗಳಿಗೆ ಅವಕಾಶವಿಲ್ಲ: ಕೋಟಾ ಶ್ರೀನಿವಾಸ ಪೂಜಾರಿ - Mangalore Temple News

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರಾ ಉತ್ಸವದಂದು ನಡೆಯುವ ಬ್ರಹ್ಮರಥೋತ್ಸವ ಸೇವೆಯಲ್ಲಿ ಸೇವಾರ್ಥಿಗಳು ಪಾಲ್ಗೊಳ್ಳಲು ಅವಕಾಶವಿಲ್ಲ ಎಂದು ಕರ್ನಾಟಕ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ..

ಬ್ರಹ್ಮರಥೋತ್ಸವದ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ

author img

By

Published : Nov 23, 2020, 4:33 PM IST

Updated : Nov 23, 2020, 9:21 PM IST

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಈ ವರ್ಷ ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರಾ ಉತ್ಸವವನ್ನು ಧಾರ್ಮಿಕ ಪರಂಪರೆಗಳು ಹಾಗೂ ದೇಗುಲದ ಸಂಪ್ರದಾಯಗಳಿಗೆ ಯಾವುದೇ ಧಕ್ಕೆ ಬಾರದ ರೀತಿ ಸರ್ಕಾರದ ಕೋವಿಡ್‌ ನಿಯಮಾವಳಿಗಳಿಗೆ ಅನುಗುಣವಾಗಿ ನೆರವೇರಿಸಲಾಗುವುದು ಎಂದು ಕರ್ನಾಟಕ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬ್ರಹ್ಮರಥೋತ್ಸವದ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ ಅವರು ದೇವರ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಹಲವಾರು ವರ್ಷಗಳ ಪರಂಪರೆಯುಳ್ಳ ಬ್ರಹ್ಮರಥೋತ್ಸವ ಸೇವೆ ನೆರವೇರಿಸಲು ಸೇವಾರ್ಥಿಗಳಿಗೆ ಈ ಹಿಂದೆ ಅವಕಾಶವಿತ್ತು. ಆದರೆ, ಈ ಬಾರಿ ಕೋವಿಡ್‌ 19 ಹಿನ್ನೆಲೆಯಲ್ಲಿ ಬ್ರಹ್ಮರಥೋತ್ಸವ ಸೇವೆ ನೆರವೇರಿಸಲು ಸೇವಾರ್ಥಿಗಳಿಗೆ ಅವಕಾಶವಿಲ್ಲ. ಪೂಜೆ ವಿಧಿವಿಧಾನಗಳನ್ನು ಸಂಪ್ರದಾಯಗಳಿಗೆ ಧಕ್ಕೆ ತರದೆ ಸಾಂಕೇತಿಕವಾಗಿ ನೆರವೇರಿಸಲಾಗುವುದು ಎಂದಿದ್ದಾರೆ.

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜನರಿಗೆ ಯಾವುದೇ ತೊಂದರೆ ನೀಡದೆ ಅರಣ್ಯ ಪ್ರದೇಶದಲ್ಲಿ ಇವಾಗ ಇರುವ ರೀತಿಯಲ್ಲಿಯೇ ಯಥಾಸ್ಥಿತಿ ಕಾಪಾಡಲಾಗುವುದು. ಅರಣ್ಯ ಪ್ರದೇಶದಲ್ಲಿ ವಾಸಿಸುವ ಬುಡಕಟ್ಟು ಜನಾಂಗದ ಜನರು ಸೇರಿದಂತೆ ಯಾರಿಗೂ ಸಮಸ್ಯೆ ಆಗದಂತೆ ಸರ್ಕಾರವು ನೋಡಿಕೊಳ್ಳಲು ಬದ್ಧವಿದೆ ಎಂದು ಸಚಿವರು ಹೇಳಿದರು.

Last Updated : Nov 23, 2020, 9:21 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.