ETV Bharat / state

ಬಡಗನ್ನೂರು ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಬಂಧಿತ ಆರೋಪಿಯ ಜಾಮೀನು ಅರ್ಜಿ ವಜಾ - ಬಡಗನ್ನೂರು ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ

ಬಡಗನ್ನೂರಿನ ದಲಿತ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಾರಾಯಣ ರೈ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.

accused is narayana rai
ಆರೋಪಿ ನಾರಾಯಣ ರೈ
author img

By

Published : Nov 3, 2021, 8:54 PM IST

ಪುತ್ತೂರು: ತಾಲೂಕಿನ ಬಡಗನ್ನೂರಿನ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.

ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ನಿವಾಸಿ ಕುದ್ಕಾಡಿ ನಾರಾಯಣ ರೈ (73) ಜಾಮೀನು ತಿರಸ್ಕೃತಗೊಂಡಿದೆ. ಆರೋಪಿ ನ .27 ರಂದು ತನ್ನ ವಕೀಲರ ಜೊತೆ ಪುತ್ತೂರಿನ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಪೀಠದ ಮುಂದೆ ಶರಣಾರಾಗಿದ್ದರು. ಅಂದು ಅವರು ಸಲ್ಲಿಸಿದ ಮಧ್ಯಾಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ನ್ಯಾಯಾಲಯವು ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ನಾರಾಯಣ ರೈ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವೂ ಅರ್ಜಿಯನ್ನು ನ. 2ರಂದು ತಿರಸ್ಕರಿಸಿದೆ.

ಏನಿದು ಪ್ರಕರಣ ?

ಸಂತ್ರಸ್ತ ಬಾಲಕಿಯೂ ಸೆ .5 ರಂದು ಮಗುವಿಗೆ ಜನ್ಮ ನೀಡಿದ್ದು, ಈ ಬಗ್ಗೆ ಪೊಕ್ಸೊ ಕಾಯ್ದೆಯಡಿ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಇಬ್ಬರನ್ನು ವಿಚಾರಣೆ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸಿ ಇನ್ನೊಬ್ಬನನ್ನು ಬಿಟ್ಟು ಕಳುಹಿಸಿದ್ದರು. ತಾನು ಕೆಲಸಕ್ಕೆ ಹೋಗುತ್ತಿದ್ದ ತೋಟದ ಮನೆ ಯಜಮಾನ ನಾರಾಯಣ ರೈ ಕುದ್ಕಾಡಿ ಈ ಕೃತ್ಯ ಎಸಗಿರುವುದಾಗಿ ಬಾಲಕಿ ನ್ಯಾಯಾಲಯದಲ್ಲಿ 164ರಡಿ ಹೇಳಿಕೆ ನೀಡಿದ್ದರು. ಅಲ್ಲದೆ ಈ ವಿಚಾರವನ್ನು ಬಹಿರಂಗಪಡಿಸದಂತೆ ಜೀವ ಬೆದರಿಕೆ ಕೂಡ ಒಡ್ಡಿದ್ದರು ಎಂದು ಆರೋಪಿಸಿದ್ದಳು.

ಅದಾದ ಬಳಿಕ ತಲೆಮರೆಸಿಕೊಂಡಿದ್ದ ನಾರಾಯಣ ರೈ, ತಮ್ಮ ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅವರ ಬಂಧನಕ್ಕೆ ಒತ್ತಾಯಿಸಿ ದಲಿತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದವು. ವಿಪಕ್ಷ ಕಾಂಗ್ರೆಸ್​ ಕೂಡ ಬಂಧನಕ್ಕೆ ಆಗ್ರಹಿಸಿತ್ತು. ಈ ನಡುವೆ ಎರಡು ವಾರಗಳ ಹಿಂದೆ ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯೂ ವಜಾಗೊಂಡಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.