ETV Bharat / state

101 ಕೋಟಿಗೂ ಅಧಿಕ ಅನುದಾನದಲ್ಲಿ ಪುತ್ತೂರು ಅಭಿವೃದ್ಧಿ: ಶಾಸಕ ಸಂಜೀವ ಮಠಂದೂರು

2018-19ನೇ ಸಾಲಿನಿಂದ ಇದುವರೆಗೆ 101ಕೋಟಿ ರೂ.ಗೂ ಅಧಿಕ ಮೊತ್ತದ ಅನುದಾನ ಬಿಡುಗಡೆಗೊಂಡಿದ್ದು, ಸಮರೋಪಾದಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ತಿಳಿಸಿದರು.

author img

By

Published : Nov 19, 2019, 12:37 PM IST

ಶಾಸಕ ಸಂಜೀವ ಮಠಂದೂರು ಮಾಹಿತಿ ನೀಡಿದರು

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 2018-19ನೇ ಸಾಲಿನಿಂದ ಇದುವರೆಗೆ 101ಕೋಟಿ ರೂ. ಅಧಿಕ ಮೊತ್ತದ ಅನುದಾನ ಬಿಡುಗಡೆಗೊಂಡಿದ್ದು, ಸಮರೋಪಾದಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ತಿಳಿಸಿದರು.

ಶಾಸಕ ಸಂಜೀವ ಮಠಂದೂರು ಮಾಹಿತಿ ನೀಡಿದರು

ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವಿವರ ನೀಡಿ, ರೂ.17 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ, ರೂ.12 ಕೋಟಿ ವೆಚ್ಚದಲ್ಲಿ ಪುತ್ತೂರು- ಉಪ್ಪಿನಂಗಡಿ ಚತುಷ್ಪಥ ರಸ್ತೆ ನಿರ್ಮಾಣ, ಒಟ್ಟು ರೂ.16.77 ಕೋಟಿ ವೆಚ್ಚದಲ್ಲಿ ಮಳೆಹಾನಿ ಯೋಜನೆಯಡಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುವುದು ಎಂದರು.

2018-19 ಮತ್ತು 2019-20ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಅನುಸೂಚಿತ ಜಾತಿ/ಗಿರಿಜನ ಉಪಯೋಜನೆಗೆ ಒಟ್ಟು ರೂ. 8.42 ಕೋಟಿ, ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 4 ಕೋಟಿ, ಟಾಸ್ಕ್​ ಪೋರ್ಸ್​ (ನಿರ್ವಹಣಾ ಅನುದಾನ) ಯೋಜನೆಯಡಿ ರೂ. 2.21 ಕೋಟಿ, 5 ಸ್ಥಳಗಳಲ್ಲಿ ಕಿಂಡಿ ಆಣೆಕಟ್ಟು ನಿರ್ಮಾಣಕ್ಕೆ 2.90 ಕೋಟಿ, ಕೃಷಿ ಭೂಮಿ ಸಂರಕ್ಷಣಾ ಕಾಮಗಾರಿಗೆ ರೂ. 6.65 ಕೋಟಿ, ಎಸ್‍ಎಫ್‍ಸಿ ವಿಶೇಷ ಅನುದಾನವಾಗಿ ರೂ. 5 ಕೋಟಿ, ಗ್ರಾಮೀಣ ರಸ್ತೆ ದುರಸ್ತಿಗೆ ರೂ. 3 ಕೋಟಿ, ಕುಕ್ಕುಪುಣಿ ಸೇತುವೆಗೆ ರೂ. 2.47 ಕೋಟಿ, ಕಾಲೇಜು ತರಗತಿ ಕೊಠಡಿ ನಿರ್ಮಾಣಕ್ಕೆ ರೂ. 2.50 ಕೋಟಿ, ಅಮ್ಚಿನಡ್ಕ-ಹಂಟ್ಯಾರ್-ಬೆಟ್ಟಂಪಾಡಿ ರಸ್ತೆ ಅಭಿವೃದ್ಧಿಗೆ ರೂ. 1.20 ಕೋಟಿ ಸೇರಿದಂತೆ ಒಟ್ಟು ರೂ. 96.74 ಕೋಟಿ ಮಂಜೂರಾಗಿದೆ. ಬನ್ನೂರಿನಲ್ಲಿ ಮಹಿಳಾ ಕಾಲೇಜ್ ಕಟ್ಟಡ ನಿರ್ಮಾಣಕ್ಕೆ 4 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ವಿವರಿಸಿದರು.

ಕಾಲಮಿತಿಯೊಳಗೆ ಪೂರ್ಣ:
ಪುತ್ತೂರು ಕ್ಷೇತ್ರಕ್ಕೆ ಮಂಜೂರಾಗಿರುವ ಎಲ್ಲಾ ಅಭಿವೃದ್ಧಿ ಯೋಜನೆಗಳನ್ನು ಖಚಿತವಾಗಿ ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು. ಮಾತ್ರವಲ್ಲದೆ, ಕಾಮಗಾರಿಯಲ್ಲಿ ಅತ್ಯುತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಈ ಕುರಿತು ತಾಂತ್ರಿಕ ವಿಭಾಗಕ್ಕೂ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮಾಡಾವು ವಿದ್ಯುತ್ ಟವರ್ ನಿರ್ಮಾಣಕ್ಕಿದ್ದ ಅಡೆತಡೆಗಳು ನಿವಾರಣೆಯಾಗಿದೆ. ಕೆಪಿಟಿಸಿಎಲ್‍ನಿಂದ ಕೈಕಾರಿನಲ್ಲಿ 110 ಕೆ.ವಿ. ವಿದ್ಯುತ್ ಸಬ್ ಸ್ಟೇಶನ್, ಮೆಸ್ಕಾಂನಿಂದ ಉಪ್ಪಿನಂಗಡಿಯ ಮಠ ಮತ್ತು ಕಾವುವಿನಲ್ಲಿ 33 ಕೆ.ವಿ. ವಿದ್ಯುತ್ ಸಬ್ ಸ್ಟೇಶನ್‍ಗಳನ್ನು ನಿರ್ಮಾಣ ಮಾಡಲಾಗುವುದು. ಉಪ್ಪಿನಂಗಡಿಯಲ್ಲಿ ಸಬ್ ಸ್ಟೇಶನ್ ಆದ ಬಳಿಕ ಪುತ್ತೂರಿಗೆ ಕುಡಿಯುವ ನೀರು ಪೂರೈಸುವ ಪಂಪ್‍ಹೌಸ್‍ಗೆ ಅಲ್ಲಿಂದಲೇ ನೇರವಾಗಿ ವಿದ್ಯುತ್ ಪೂರೈಸಲು ಸಾಧ್ಯವಾಗುತ್ತದೆ. ಬೆಂದ್ರ್‍ತೀರ್ಥ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ರೂಪುರೇಷೆಗಳನ್ನು ಹಾಕಿಕೊಳ್ಳಲಾಗುವುದು. ಈ ಕುರಿತು ತಾಂತ್ರಿಕ ಪರಿಣಿತರಿಂದ ಸಲಹೆಗಳನ್ನು ಪಡೆದುಕೊಳ್ಳಲಾಗುವುದು. ಕ್ಷೇತ್ರದಲ್ಲಿರುವ ದೇವಸ್ಥಾನಗಳನ್ನು ಧಾರ್ಮಿಕ ಮತ್ತು ದತ್ತಿ ಇಲಾಖೆಯಿಂದ ಅಭಿವೃದ್ಧಿಪಡಿಸಲು ರೂ. 60 ಲಕ್ಷಗಳ ಪ್ರಸ್ತಾವನೆಯನ್ನು ಕಳುಹಿಸಲಾಗುವುದು. 2018-19ನೇ ಸಾಲಿನಲ್ಲಿ ಯಾವುದೇ ಅನುದಾನ ಮಂಜೂರಾಗಿರಲಿಲ್ಲ. ಇದೀಗ ಎರಡು ಸಾಲಿನ ಅನುದಾನ ಮಂಜೂರಾಗಿರುವುದು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವಲ್ಲಿ ಹೆಚ್ಚಿನ ಬಲ ಬಂದಂತಾಗಿದೆ ಎಂದರು.

ಬಿಜೆಪಿ ನಗರ ಮಂಡಲ ಅಧ್ಯಕ್ಷ ಜೀವಂಧರ ಜೈನ್, ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಆರ್.ಸಿ. ನಾರಾಯಣ ಉಪಸ್ಥಿತರಿದ್ದರು.

Intro:Body:ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 2018-19ನೇ ಸಾಲಿನಿಂದ ಇದುವರೆಗೆ ರೂ. 101 ಕೋಟಿ ಅಧಿಕ ಮೊತ್ತದ ಅನುದಾನ ಬಿಡುಗಡೆಗೊಂಡಿದ್ದು, ಸಮರೋಪಾದಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ತಿಳಿಸಿದರು.
ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವಿವರ ನೀಡಿ, ರೂ. 17 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ, ರೂ. 12 ಕೋಟಿ ವೆಚ್ಚದಲ್ಲಿ ಪುತ್ತೂರು- ಉಪ್ಪಿನಂಗಡಿ ಚತುಷ್ಪಥ ರಸ್ತೆ ನಿರ್ಮಾಣ, ಒಟ್ಟು ರೂ. 16.77 ಕೋಟಿ ವೆಚ್ಚದಲ್ಲಿ ಮಳೆಹಾನಿ ಯೋಜನೆಯಡಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುವುದು ಎಂದರು.
2018-19 ಮತ್ತು 2019-20ನೇ ಸಾಲಿನಲ್ಲಿ ಒಟ್ಟು ಲೋಕೋಪಯೋಗಿ ಇಲಾಖೆಯ ಅನುಸೂಚಿತ ಜಾತಿ/ ಗಿರಿಜನ ಉಪಯೋಜನೆಗೆ ರೂ. 8.42 ಕೋಟಿ, ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 4 ಕೋಟಿ, ಟಾಸ್ಕ್‍ಫೋರ್ಸ್(ನಿರ್ವಹಣಾ ಅನುದಾನ) ಯೋಜನೆಯಡಿ ರೂ. 2.21 ಕೋಟಿ, 5 ಸ್ಥಳಗಳಲ್ಲಿ ಕಿಂಡಿ ಆಣೆಕಟ್ಟು ನಿರ್ಮಾಣಕ್ಕೆ 2.90 ಕೋಟಿ, ಕೃಷಿ ಭೂಮಿ ಸಂರಕ್ಷಣಾ ಕಾಮಗಾರಿಗೆ ರೂ. 6.65 ಕೋಟಿ, ಎಸ್‍ಎಫ್‍ಸಿ ವಿಶೇಷ ಅನುದಾನವಾಗಿ ರೂ. 5 ಕೋಟಿ, ಗ್ರಾಮೀಣ ರಸ್ತೆ ದುರಸ್ತಿಗೆ ರೂ. 3 ಕೋಟಿ, ಕುಕ್ಕುಪುಣಿ ಸೇತುವೆಗೆ ರೂ. ಕಾಲೇಜ್ ತರಗತಿ ಕೊಠಡಿ ನಿರ್ಮಾಣಕ್ಕೆ ರೂ. 2.47 ಕೋಟಿ, 2.50 ಕೋಟಿ, ಅಮ್ಚಿನಡ್ಕ-ಹಂಟ್ಯಾರ್-ಬೆಟ್ಟಂಪಾಡಿ ರಸ್ತೆ ಅಭಿವೃದ್ಧಿಗೆ ರೂ. 1.20 ಕೋಟಿ ಸೇರಿದಂತೆ ಒಟ್ಟು ರೂ. 96.74 ಕೋಟಿ ಮಂಜೂರಾಗಿದೆ. ಬನ್ನೂರಿನಲ್ಲಿ ಮಹಿಳಾ ಕಾಲೇಜ್ ಕಟ್ಟಡ ನಿರ್ಮಾಣಕ್ಕೆ ಸುಮಾರು ರೂ. 4 ಕೋಟಿ ಅನುದಾನ ಮಂಜೂರಾಗಿದೆ ಎಂದು ಅವರು ವಿವರಿಸಿದರು.
ಕಾಲಮಿತಿಯೊಳಗೆ ಪೂರ್ಣ
ಪುತ್ತೂರು ಕ್ಷೇತ್ರಕ್ಕೆ ಮಂಜೂರಾಗಿರುವ ಎಲ್ಲಾ ಅಭಿವೃದ್ಧಿ ಯೋಜನೆಗಳನ್ನು ಖಚಿತವಾಗಿ ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು. ಮಾತ್ರವಲ್ಲದೆ, ಕಾಮಗಾರಿಯಲ್ಲಿ ಅತ್ಯುತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಈ ಕುರಿತು ತಾಂತ್ರಿಕ ವಿಭಾಗಕ್ಕೂ ಸೂಚನೆ ನೀಡಲಾಗಿದೆ ಎಂದು ಸಂಜೀವ ಮಠಂದೂರು ಹೇಳಿದರು.
ಮಾಡಾವು ವಿದ್ಯುತ್ ಟವರ್ ನಿರ್ಮಾಣಕ್ಕಿದ್ದ ಅಡೆತಡೆಗಳು ನಿವಾರಣೆಯಾಗಿದೆ. ಕೆಪಿಟಿಸಿಎಲ್‍ನಿಂದ ಕೈಕಾರಿನಲ್ಲಿ 110 ಕೆ.ವಿ. ವಿದ್ಯುತ್ ಸಬ್ ಸ್ಟೇಶನ್, ಮೆಸ್ಕಾಂನಿಂದ ಉಪ್ಪಿನಂಗಡಿಯ ಮಠ ಮತ್ತು ಕಾವುವಿನಲ್ಲಿ 33 ಕೆ.ವಿ. ವಿದ್ಯುತ್ ಸಬ್ ಸ್ಟೇಶನ್‍ಗಳನ್ನು ನಿರ್ಮಾಣ ಮಾಡಲಾಗುವುದು. ಉಪ್ಪಿನಂಗಡಿಯಲ್ಲಿ ಸಬ್ ಸ್ಟೇಶನ್ ಆದ ಬಳಿಕ ಪುತ್ತೂರಿಗೆ ಕುಡಿಯುವ ನೀರು ಪೂರೈಸುವ ಪಂಪ್‍ಹೌಸ್‍ಗೆ ಅಲ್ಲಿಂದಲೇ ನೇರವಾಗಿ ವಿದ್ಯುತ್ ಪೂರೈಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಬೆಂದ್ರ್‍ತೀರ್ಥ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ರೂಪುರೇಷೆಗಳನ್ನು ಹಾಕಿಕೊಳ್ಳಲಾಗುವುದು. ಈ ಕುರಿತು ತಾಂತ್ರಿಕ ಪರಿಣಿತರಿಂದ ಸಲಹೆಗಳನ್ನು ಪಡೆದುಕೊಳ್ಳಲಾಗುವುದು. ಕ್ಷೇತ್ರದಲ್ಲಿರುವ ದೇವಸ್ಥಾನಗಳನ್ನು ಧಾರ್ಮಿಕ ಮತ್ತು ದತ್ತಿ ಇಲಾಖೆಯಿಂದ ಅಭಿವೃದ್ಧಿಪಡಿಸಲು ರೂ. 60 ಲಕ್ಷಗಳ ಪ್ರಸ್ತಾವನೆಯನ್ನು ಕಳುಹಿಸಲಾಗುವುದು ಎಂದ ಅವರು, 2018-19ನೇ ಸಾಲಿನಲ್ಲಿ ಯಾವುದೇ ಅನುದಾನ ಮಂಜೂರಾಗಿರಲಿಲ್ಲ. ಇದೀಗ ಎರಡು ಸಾಲಿನ ಅನುದಾನ ಮಂಜೂರಾಗಿರುವುದು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವಲ್ಲಿ ಹೆಚ್ಚಿನ ಬಲ ಬಂದಂತಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಜೀವಂಧರ ಜೈನ್, ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಆರ್.ಸಿ. ನಾರಾಯಣ ಉಪಸ್ಥಿತರಿದ್ದರು.
---------Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.