ETV Bharat / state

ಪುತ್ತೂರು: ಗಾಂಜಾ ನಶೆಯಲ್ಲಿ ಜನರಿಗೆ ಕಿರಿಕಿರಿ ಕೊಡುತ್ತಿದ್ದ ಇಬ್ಬರು ಅಂದರ್​ - ಪುತ್ತೂರು ಗಾಂಜಾ ಸುದ್ದಿ

ಪುತ್ತೂರು ತಾಲೂಕಿನ ಮುಕ್ರಂಪಾಡಿ ಬಸ್‌ ತಂಗುದಾಣದ ಬಳಿ ನಿಲ್ಲಿಸಿದ್ದ ಕಾರೊಂದರ ಬಳಿ ಗಾಂಜಾ ನಶೆಯಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

Puttur: Two arrested for consuming marijuana
ಪುತ್ತೂರು: ಗಾಂಜಾ ನಶೆಯಲ್ಲಿದ್ದ ಇಬ್ಬರು ಪೊಲೀಸರ ವಶಕ್ಕೆ
author img

By

Published : Sep 20, 2020, 6:46 PM IST

ಪುತ್ತೂರು(ದಕ್ಷಿಣ ಕನ್ನಡ): ಮುಕ್ರಂಪಾಡಿ ಬಸ್ ತಂಗುದಾಣದಲ್ಲಿ ಗಾಂಜಾ ನಶೆಯಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ಮುಕ್ರಂಪಾಡಿ ಬಸ್‌ ತಂಗುದಾಣದ ಬಳಿ ನಿಲ್ಲಿಸಿದ್ದ ಕಾರೊಂದರ ಬಳಿ ಗಾಂಜಾ ನಶೆಯಲ್ಲಿದ್ದ ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿದ್ದ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮಾಹಿತಿ ಮೇರೆಗೆ ಸ್ಥಳಕ್ಕೆ ಅಗಮಿಸಿದ ಎಸ್ಐ ಜಂಬುರಾಜ್ ಮಹಾಜನ್ ಅವರು, ಅಲ್ಲಿದ್ದ ಅಬ್ದುಲ್ಲಾ, ಮೊಹಮ್ಮದ್ ಆರೀಫ್ ಮತ್ತು ರಹಿಮಾನ್ ಖಾನ್ ಮಂಜೇಶ್ವರ ಅವರನ್ನು ಹಾಗೂ ಅವರ ಕೇರಳ ನೋಂದಣಿಯ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅಬ್ದುಲ್ಲಾ ಮತ್ತು ರಹಿಮನ್ ಖಾನ್ ಇಬ್ಬರೂ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಸದ್ಯ ಅವರಿಬ್ಬರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.