ETV Bharat / state

ಕ್ವಾರಂಟೈನ್ ಆದೇಶ ಉಲ್ಲಂಘಿಸಿದವರ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಎಫ್‌ಐಆರ್‌.. - dakshinakannada

14 ದಿನಗಳ ಕಾಲ ಹೋಂ ಕ್ವಾರಂಟೈನ್​ನ​ಲ್ಲಿರುವಂತೆ ಈತನಿಗೆ ಸೂಚಿಸಲಾಗಿತ್ತು. ಅಲ್ಲದೆ ಜಿಲ್ಲಾಡಳಿತ ಕೂಡ ಪಟ್ಟಿ ಬಿಡುಗಡೆ ಮಾಡಿತ್ತು.

dakshina kannada
ಕ್ವಾರಂಟೈನ್ ಆದೇಶ ಉಲ್ಲಂಘನೆ
author img

By

Published : Apr 1, 2020, 1:02 PM IST

ದಕ್ಷಿಣ ಕನ್ನಡ : ವಿದೇಶದಿಂದ ಬಂದ ಹೋಂ ಕ್ವಾರಂಟೈನ್​ ಉಲ್ಲಂಘಿಸಿದವನೊಬ್ಬನ ವಿರುದ್ಧ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವ್ಯಕ್ತಿ ಕೆಲ ದಿನಗಳ ಹಿಂದೆ ವಿದೇಶದಿಂದ ಆಗಮಿಸಿದ್ದ. 14 ದಿನಗಳ ಕಾಲ ಹೋಂ ಕ್ವಾರಂಟೈನ್​ನ​ಲ್ಲಿರುವಂತೆ ಈತನಿಗೆ ಸೂಚಿಸಲಾಗಿತ್ತು. ಅಲ್ಲದೆ ಜಿಲ್ಲಾಡಳಿತ ಕೂಡ ಪಟ್ಟಿ ಬಿಡುಗಡೆ ಮಾಡಿತ್ತು. ಅದರಂತೆ ಮಾ.30ರಂದು ಆರೋಗ್ಯ, ಕಂದಾಯ ಇಲಾಖೆ, ಗ್ರಾಪಂನ ತಂಡ ಈತನ ಮನೆಗೆ ಭೇಟಿ ನೀಡಿದ ವೇಳೆ ಆ ವ್ಯಕ್ತಿ ಮನೆಯಲ್ಲಿ ಇಲ್ಲದೇ ಇರುವುದು ಗೊತ್ತಾಗಿದೆ.

ಈ ಕುರಿತು ಮನೆಯವರಲ್ಲಿ ವಿಚಾರಿಸಿದಾಗ ಈತ ಮನೆಯಿಂದ ಹೊರಗಡೆ ಹೋಗಿರುವ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ಆ ವ್ಯಕ್ತಿಯನ್ನು ಮನೆಗೆ ಬರುವಂತೆ ಸೂಚಿಸಲಾಗಿದೆ. ಬಳಿಕ ಆ ವ್ಯಕ್ತಿಗೆ ಮನೆಯಲ್ಲಿರುವಂತೆ ತಿಳಿಸಲಾಯಿತು. ಈ ವೇಳೆ ಅಧಿಕಾರಿಗಳ ವಿರುದ್ಧ ಸಕಾರಾತ್ಮಕವಾಗಿ ಸ್ಪಂದಿಸದ ಈ ವ್ಯಕ್ತಿಯು ದುರ್ವರ್ತನೆ ತೋರಿಸಿದ್ದ ಎನ್ನಲಾಗಿದೆ. ಸರ್ಕಾರದ ಆದೇಶ ಧಿಕ್ಕರಿಸಿದ್ದಲ್ಲದೇ ಅಧಿಕಾರಿಗಳ ವಿರುದ್ಧವೂ ದುರ್ವರ್ತನೆ ತೋರಿಸಿದ ಕಾರಣಕ್ಕಾಗಿ ಆತನ ಮೇಲೂ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.