ETV Bharat / state

ಏ 27 ಕ್ಕೆ ಮಂಗಳೂರಿನಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ರೋಡ್ ಶೋ - ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರವನ್ನು ಏ. 27 ರಂದು‌ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಂಜುನಾಥ ಭಂಡಾರಿ ಮಾಹಿತಿ ನೀಡಿದ್ದಾರೆ.

Manjunath Bhandari spoke at the press conference.
ಕಾಂಗ್ರೆಸ್ ಮುಖಂಡ ಮಂಜುನಾಥ ಭಂಡಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
author img

By

Published : Apr 23, 2023, 8:45 PM IST

ಏ 27 ಕ್ಕೆ ಮಂಗಳೂರಿನಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ರೋಡ್ ಶೋ: ಮಂಜುನಾಥ್​ ಭಂಡಾರಿ

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಕರಾವಳಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ನಗರದಲ್ಲಿ ಭಾನುವಾರ ಕರೆದಿದ್ದ ‌ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಏ. 27 ರಂದು‌ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ರಾಹುಲ್ ಗಾಂಧಿ ಅಂದು ಬೆಳಗ್ಗೆ ಉಡುಪಿ ಜಿಲ್ಲೆಯ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ಮಧ್ಯಾಹ್ನ ಕಾಪುವಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ ಎಂದು ಮಾಹಿತಿ ನೀಡಿದರು.

ಆ ಬಳಿಕ ಮಂಗಳೂರಿಗೆ ರಾಹುಲ್ ಗಾಂಧಿ ಆಗಮಿಸಿ ಸಂಜೆ ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ನಗರದ ಬಲ್ಮಠದ ಕಲೆಕ್ಟರ್ ಗೇಟ್​​ನಿಂದ ಎ ಬಿ ಶೆಟ್ಟಿ ಸರ್ಕಲ್ ವರೆಗೆ ಸುಮಾರು ಎರಡು ಕಿಲೋ ಮೀಟರ್ ರೋಡ್ ಶೋ ಅನ್ನು ನಮ್ಮ ನಾಯಕ ನಡೆಸಲಿದ್ದಾರೆ. ರೋಡ್ ಶೋ ಮುಗಿಯುವ ಸಂದರ್ಭದಲ್ಲಿ ಅವರ ಭಾಷಣವನ್ನು ಆಯೋಜಿಸಲು ಪಕ್ಷ ಮುಂದಾಗಿದೆ. ರಾಹುಲ್ ಗಾಂಧಿಯವರ ರೋಡ್ ಶೋ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು, ಮತದಾರರು ಭಾಗಿಯಾಗಲಿದ್ದಾರೆ ಎಂದು ಮಂಜುನಾಥ್​ ಭಂಡಾರಿ ವಿವರಿಸಿದರು.

ಏ. 24,25 ಕ್ಕೆ ಖರ್ಗೆ ಮಂಗಳೂರಿಗೆ.. ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏ.24 ಮತ್ತು 25 ರಂದು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಏ.24 ರಂದು ಸಂಜೆ ಹೆಲಿಕಾಪ್ಟರ್ ನಲ್ಲಿ ಮಂಗಳೂರಿಗೆ ಬರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏ. 25 ರಂದು ಮಾಧ್ಯಮಗೋಷ್ಟಿ ನಡೆಸಿ ಸುಳ್ಯದ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಂದು ಅಭ್ಯರ್ಥಿ ಪರ ಉದ್ದೇಶಿಸಿ ಮಾತನಾಡುತ್ತಾರೆ. ನಂತರ ಸಂಜೆ ಮಂಗಳೂರಿನಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕೂಡಲಸಂಗಮ ಸಂಗಮನಾಥನ ದರ್ಶನ ಪಡೆದ ರಾಹುಲ್ ಗಾಂಧಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಯುವ ನಾಯಕ ರಾಹುಲ್ ಗಾಂಧಿ ಇಂದು ಬಸವ ಜಯಂತಿ ಅಂಗವಾಗಿ ಅಣ್ಣ ಬಸವಣ್ಣನವರ ನಾಡು, ಧಾರ್ಮಿಕ ಕೇಂದ್ರ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ಭೇಟಿ ನೀಡಿ ಸಂಗಮನಾಥನ ದರ್ಶನ ಪಡೆದರು.

ರಾಹುಲ್ ಗಾಂಧಿ ತ್ರಿವೇಣಿ ಸಂಗಮದಲ್ಲಿರುವ ಐಕ್ಯ ಸ್ಥಳ ಹಾಗೂ ಸಂಗಮನಾಥ ದೇವರ ದರ್ಶನ ಪಡೆದು, ಸಂಗಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರ ಸಲ್ಲಿಸಿದರು. ನಂತರ ಬಸವಣ್ಣನವರ ಐಕ್ಯ ಸ್ಥಳ ಮತ್ತು ತ್ರಿವೇಣಿ ನದಿಗಳ ಸಂಗಮ ವೀಕ್ಷಣೆ ಮಾಡಿ 12ನೇ ಶತಮಾನದ ಇತಿಹಾಸ ಅರಿತುಕೊಂಡರು.

ಬಳಿಕ ಮಾತನಾಡಿದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು, ಬಸವ ಜಯಂತಿ ಆಚರಣೆಗೆ ಆಗಮಿಸಿದ್ದಕ್ಕೆ ಬಹಳ ಖುಷಿಯಾಗಿದೆ. ಇಂತಹ ಅವಕಾಶ ಮಾಡಿಕೊಟ್ಟ ಸ್ವಾಮೀಜಿಗಳಿಗೆ ಆಭಾರಿ ಆಗಿದ್ದೇನೆ ಎಂದರು.

ಇದನ್ನೂಓದಿ:ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ವ್ಯವಸ್ಥಿತ ಸಂಚು: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.