ETV Bharat / state

ಪುತ್ತೂರು: ರೈಲ್ವೆ ಹಳಿಯ ಕ್ಲಿಪ್ ಕದಿಯುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್​ - ಪುತ್ತೂರು ರೈಲ್ವೆ ಹಳಿಯ ಕ್ಲಿಪ್ ಕಳ್ಳತನ

ರೈಲು ಹಳಿಯ ಕ್ಲಿಪ್ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ತಾಲೂಕಿನ ಕಲ್ಲಡ್ಕ ಬಳಿ ಬಂಧಿಸಲಾಗಿದೆ.

railway-clip-thieves-arrested-in-putturu
ರೈಲ್ವೆ ಹಳಿಯ ಕ್ಲಿಪ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
author img

By

Published : Sep 5, 2021, 1:39 PM IST

ಮಂಗಳೂರು: ಪುತ್ತೂರು ತಾಲೂಕಿನ ಕಲ್ಲಡ್ಕ ಬಳಿಯ ರೈಲು ಹಳಿಯ ಕ್ಲಿಪ್ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಸಾಕಷ್ಟು ಮಂದಿ ಆರೋಪಿಗಳು ಸುಮಾರು ಒಂದು ತಿಂಗಳಿನಿಂದ ರೈಲು ಹಳಿಯ ಕ್ಲಿಪ್​ಗಳನ್ನು ಕಳ್ಳತನ ಮಾಡುತ್ತಿರುವ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮಫ್ತಿಯಲ್ಲಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದರು.

Railway clip thieves arrested in putturu
ಆರೋಪಿಗಳ ಬಂಧನ

ನಿನ್ನೆ ಮಧ್ಯಾಹ್ನ ಸುಮಾರು 3 ಗಂಟೆ ಹೊತ್ತಿಗೆ ಸ್ಥಳೀಯರು ನೀಡಿದ ಮಾಹಿತಿಯಂತೆ ಮಫ್ತಿಯಲ್ಲಿದ್ದ ರೈಲ್ವೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಒಂದು ಟಾಟಾ ಏಸ್​​ ವಾಹನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಆರೋಪಿಗಳನ್ನು ಸಕಲೇಶಪುರ ರೈಲ್ವೆ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೊಮ್ಮಾಯಿ ಸರ್ಕಾರದ ಮಹಾತ್ವಾಕಾಂಕ್ಷಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಲೋಕಾರ್ಪಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.