ಮಂಗಳೂರು: ನಗರದಲ್ಲಿ ಕಳೆದ ರಾತ್ರಿಯಿಂದಲೇ ಆರಂಭವಾಗಿರುವ ಮಳೆ ಒಂದು ಕ್ಷಣವೂ ಬಿಡುವು ಕೊಡದಂತೆ ನಿರಂತರವಾಗಿ ಸುರಿಯುತ್ತಿದೆ.
ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗ ಹಾಗೂ ಮಲೆನಾಡು ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ನಿನ್ನೆಯಿಂದ ಇಂದಿನವರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಎಲ್ಲರೂ ಎಚ್ಚರಿಕೆಯಿಂದಿದ್ದು, ಯಾರೂ ಸಮುದ್ರ ತೀರಕ್ಕೆ ತೆರಳಬಾರದೆಂದು ಸೂಚನೆ ನೀಡಲಾಗಿದೆ.