ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಮಳೆ ಅಬ್ಬರ ಕಡಿಮೆಯಾಗಿದೆ. ನೇತ್ರಾವತಿ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ಆದರೂ ಬೆಳ್ತಂಗಡಿಯ ಬಂಜಾರುಮಲೆ ಗ್ರಾಮದಲ್ಲಿ ಬೀಡು ಬಿಟ್ಟಿರುವ ಎನ್‌ಡಿಆರ್‌ಎಫ್ ತಂಡದ ಇನ್ಸ್‌ಪೆಕ್ಟರ್ ಸುಭಾಷ್ ಮಹಾಲಾ ತಮ್ಮ ತಂಡದೊಂದಿಗೆ ನೆರೆ ಸಂತ್ರಸ್ತರ ರಕ್ಷಣಾ ಕಾರ್ಯ ಹಾಗೂ ಅಗತ್ಯ ನೆರವು ನೀಡತೊಡಗಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಬಂಜಾರುಮಲೆಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲನೆ ನಡೆಸಿದರು. ಈಗಾಗಲೇ ಹಲವಾರು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದ್ದು, ಇನ್ನೂ ರಕ್ಷಣಾ ಕಾರ್ಯ ನಡೆಯುತ್ತಲೇ ಇದೆ. ಅಲ್ಲದೆ ಈ ಭಾಗದಲ್ಲಿ ಸಂತ್ರಸ್ತರಿಗೆ ಆಹಾರವನ್ನು ಪೂರೈಸುವ ಕಾರ್ಯವನ್ನು ಎನ್‌ಡಿಆರ್‌ಎಫ್ ತಂಡ ಮಾಡುತ್ತಿದೆ.
ಬೆಳ್ತಂಗಡಿ ತಾಲೂಕಿನಲ್ಲಿ 43 ಮಂದಿಯ ಎನ್‌ಡಿಆರ್‌ಎಫ್ ತಂಡ ಸಂತ್ರಸ್ತರಿಗೆ ನೆರವು ಒದಗಿಸಲು ನಿಯೋಜನೆ ಗೊಂಡಿದೆ. ಅಲ್ಲದೆ ಅಗ್ನಿಶಾಮಕ ದಳ, ಕೋಸ್ಟ್ ಗಾರ್ಡ್, ಹೋಮ್ ಗಾರ್ಡ್‌ಗಳ ತಂಡವೂ ಸ್ಥಳದಲ್ಲಿ ಮೊಕ್ಕಾಂ ಹೂಡಿ ನೆರೆ ಸಂತ್ರಸ್ತರಿಗೆ ನೆರವು ನೀಡುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಈವರೆಗೆ 301 ಆಹಾರ ಕಿಟ್‌ಗಳ ವಿತರಣೆಯಾಗಿದೆ.