ಕಡಬ/ದಕ್ಷಿಣ ಕನ್ನಡ: ಮೂರು ಮಕ್ಕಳ ತಂದೆಯೋರ್ವ ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಗಿದ್ದು, ಇದೀಗ ಆಕೆ ಮೂರು ತಿಂಗಳ ಗರ್ಭಿಣಿಯಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಡಬ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಕೆರ್ಮಾಯಿ ಸಿಆರ್ಸಿ ಕಾಲನಿ ನಿವಾಸಿ ಮಹಾದೇವ(40) ಎಂದು ಗುರುತಿಸಲಾಗಿದೆ.
ಆರೋಪಿಯು ಕಡಬ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದಿದ್ದು, ಇದೀಗ ಆಕೆ ಮೂರು ತಿಂಗಳ ಗರ್ಭಿಣಿಯಾಗಿದ್ದರಿಂದ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ನೀಡಿದ ದೂರಿನ ಹಿನ್ನಲೆಯಲ್ಲಿ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.