ETV Bharat / state

ಅಪ್ರಾಪ್ತೆ ಮೇಲೆ ಅತ್ಯಾಚಾರ: ಕಾಮುಕನಿಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ - ಅತ್ಯಾಚಾರ ಎಸಗಿದ ಆರೋಪದ ಮೇಲೆ

ಅಪ್ರಾಪ್ತೆ ಮೇಲೆ ಅತ್ಯಾಚಾರ- ಮಾವನಿಂದಲೇ ಬಲವಂತವಾಗಿ ನಡೆದ ಕೃತ್ಯ- 15 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು
rape-of-minor-accused-sentenced-to-15-years-in-prison
author img

By

Published : Dec 28, 2022, 10:40 AM IST

ಮಂಗಳೂರು: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 32 ವರ್ಷದ ವ್ಯಕ್ತಿಗೆ 15 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡವನ್ನು ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್‌ಟಿಎಸ್‌ಸಿ-II (ಪೋಕ್ಸೊ) ನ್ಯಾಯಾಧೀಶರಾದ ಕೆ.ಎಂ. ರಾಧಾಕೃಷ್ಣ ಈ ಆದೇಶ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರವನ್ನೂ ನೀಡುವಂತೆ ಸೂಚನೆ ನೀಡಲಾಗಿದೆ.

ಪ್ರಕರಣ ಹಿನ್ನೆಲೆ : 2021 ರ ಆಗಸ್ಟ್ 9ರಂದು ಸಂತ್ರಸ್ತ ವಿದ್ಯಾರ್ಥಿನಿ ಶಾಲೆ ಮುಗಿಸಿ, ಮನೆಗೆ ಹಿಂದಿರುಗುವಾಗ ಆರೋಪಿ ಅವರಿಬ್ಬರನ್ನು ಹಿಂಬಾಲಿಸಿದ್ದಾನೆ. ಈ ವೇಳೆ ದಾರಿಯಲ್ಲಿ ಆತ ಸಂತ್ರಸ್ತೆಯ ಸ್ನೇಹಿತೆಯನ್ನು ನಿಂದಿಸಿ ಆಕೆಯನ್ನು ಅಲ್ಲಿಂದ ಕಳುಹಿಸಿದ್ದ. ನಂತರ ಆರೋಪಿಯು ಸಂತ್ರಸ್ತೆ ಬಳಿ ಫೋನ್ ನಂಬರ್ ಕೇಳಿದಾಗ ಆಕೆ ಕೊಡಲು ನಿರಾಕರಿಸಿ ಮುಂದೆ ಹೋಗಿದ್ದಾಳೆ. ಈ ವೇಳೆ ಆಕೆಯನ್ನು ಬಲವಂತವಾಗಿ ಗುಡ್ಡಗಾಡು ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಸಂತ್ರಸ್ತೆಯನ್ನು ಬಲವಂತವಾಗಿ ಕರೆದೊಯ್ಯುವುದನ್ನು ಗಮನಿಸಿದ್ದ ಸ್ನೇಹಿತೆ ಮನೆಗೆ ಧಾವಿಸಿ ಈ ಕುರಿತು ಮಾಹಿತಿ ನೀಡಿದ್ದಳು. ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ಮನಗಂಡು ತಾಯಿ ದೂರು ದಾಖಲಿಸಿದ್ದರು. ಆರೋಪಿ ಯಾರಿಗೂ ಏನನ್ನೂ ಹೇಳದಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದನು.

ಪ್ರಕರಣ ದಾಖಲಾದ ನಂತರ ಆಗಸ್ಟ್ 15 ರಂದು ಆರೋಪಿಯನ್ನು ಬಂಧಿಸಲಾಗಿತ್ತು. ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆದಿತ್ತು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟರಮಣ ಸ್ವಾಮಿ ಸಂತ್ರಸ್ತೆ ಪರ ವಾದಿಸಿದ್ದರು.

ಇದನ್ನೂ ಓದಿ: ರಸ್ತೆ ಬದಿ ನಿಂತಿದ್ದಾಗ ಕಾರು ಢಿಕ್ಕಿ: ಉಳ್ಳಾಲದಲ್ಲಿ ಬಾಲಕ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.